ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಬ್ಯಾಂಕ್ ಸಿಬ್ಬಂದಿಗಳು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದು, ಮಂಗಳವಾರ ಎಲ್ಲ ರೀತಿಯ ಬ್ಯಾಂಕ್ ವಹಿವಾಟುಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಬ್ಯಾಂಕ್ ಸಿಬ್ಬಂದಿಗಳು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದು, ಮಂಗಳವಾರ ಎಲ್ಲ ರೀತಿಯ ಬ್ಯಾಂಕ್ ವಹಿವಾಟುಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಬ್ಯಾಂಕ್ ಸಿಬ್ಬಂದಿಗಳ ನೌಕರರ ಒಕ್ಕೂಟ ಯುಎಫ್ ಬಿಯು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆದಿತ್ತು ಮತ್ತು ಕೇಂದ್ರ ಸರ್ಕಾರ ಕೂಡ ಬೇಡಿಕೆ ಈಡೇರಿಸುವುದಾಗಿ ಹೇಳಿತ್ತು. ಆದರೆ ಬೇಡಿಕೆ ಈಡೇರಿಕೆಗೆ  ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನಾಳೆ ಬ್ಯಾಂಕ್ ಸಿಬ್ಬಂದಿಗಳು ಮುಷ್ಕರ ಹೂಡಲಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ನಾಳೆ ಎಟಿಎಂಗಳಿಗೆ ಹಣ ತುಂಬುವ ಸಿಬ್ಬಂದಿಗಳು ದೊರೆಯದ ಕಾರಣ  ಎಟಿಎಂಗಳಿಗೆ ಹಣ ತುಂಬು ಕಾರ್ಯ ನಡೆಯುವುದಿಲ್ಲ.

ಖಾಸಗಿ ಬ್ಯಾಂಕ್ ಗಳ ವಹಿವಾಟು ಸಾಮಾನ್ಯ
ಇನ್ನು ಮುಷ್ಕರದಿಂದ ಖಾಸಗಿ ಬ್ಯಾಂಕ್ ಗಳು ಹೊರಗುಳಿದಿದ್ದು, ಐಸಿಐಸಿಐ, ಹೆಚ್ ಡಿಎಫ್ ಸಿ, ಎಕ್ಸಿಸ್ ಬ್ಯಾಂಕ್ ನಂತಹ ಖಾಸಗಿ ಬ್ಯಾಂಕ್ ಗಳ ಕಾರ್ಯ ನಿರ್ವಹಣೆಯಲ್ಲಿ ಯಾವುದೇ ತಡೆ ಇರುವುದಿಲ್ಲ. ಆದರೆ ಚೆಕ್ ಗಳ ಕಾರ್ಯ  ನಿರ್ವಹಣೆ ಮತ್ತು ಚೆಕ್ ಕ್ಲಿಯರೆನ್ಸ್ ವಿಳಂಬವಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಈ ಹಿಂದೆ ಇದೇ ವಿಚಾರವಾಗಿ ಫೆಬ್ರವರಿ 21ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದಿದ್ದ ಸಭೆ ವಿಫಲವಾಗಿತ್ತು. ಹೀಗಾಗಿ ನಾಳೆ ಮುಷ್ಕರ ನಡೆಸಲು ಬ್ಯಾಂಕ್ ಸಿಬ್ಬಂದಿಗಳು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.  ಇಂದು ಸಂಜೆ ವೇಳೆಗೆ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com