ಹುತಾತ್ಮ ಯೋಧನ ಪುತ್ರಿಯ ಮನಸ್ಸನ್ನು ಕಲುಷಿತಗೊಳಿಸುತ್ತಿರುವವರು ಯಾರು?: ಕಿರಣ್ ರಿಜಿಜು

ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿಯ ಮನಸ್ಸನ್ನು ಕಲುಷಿತಗೊಳಿಸುತ್ತಿರುವವರು ಯಾರು? ಭಾರತ ಎಂದಿಗೂ ಯಾರ ಮೇಲೆಯೂ ದಾಳಿ ಮಾಡಿಲ್ಲ. ಆದರೆ, ನಮ್ಮ ಮೇಲೆಯೇ ದಾಳಿ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು...
ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು
ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು
ನವದೆಹಲಿ: ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿಯ ಮನಸ್ಸನ್ನು ಕಲುಷಿತಗೊಳಿಸುತ್ತಿರುವವರು ಯಾರು? ಭಾರತ ಎಂದಿಗೂ ಯಾರ ಮೇಲೆಯೂ ದಾಳಿ ಮಾಡಿಲ್ಲ. ಆದರೆ, ನಮ್ಮ ಮೇಲೆಯೇ ದಾಳಿ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಗುರುವಾರ ಹೇಳಿದ್ದಾರೆ. 
ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿಯ ಪೋಸ್ಟ್ ವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಓಡಾಡುತ್ತಿದ್ದು, ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಯುವ ಹುಡುಗಿಯ ಮನಸ್ಸನ್ನು ಕಲುಷಿತಗೊಳಿಸುತ್ತಿರವವರು ಯಾರು? ಶಕ್ತಿಶಾಲಿಯಾಗಿರುವ ಸೇನಾ ಪಡೆ ಯಾವಾಗಲೂ ಯುದ್ಧವನ್ನು ನಿಯಂತ್ರಿಸುತ್ತದೆ. ಭಾರತ ಎಂದಿಗೂ ಯಾರ ಮೇಲೆಯೂ ದಾಳಿ ಮಾಡಿಲ್ಲ. ಆದರೆ, ಭಾರತ ಮೇಲೆಯೇ ದಾಳಿ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕೆಲವರು ಭಾರತದಲ್ಲಿ ಸ್ವಾತಂತ್ರ್ಯ ಬೇಕೆಂದು ಹೇಳುತ್ತಿದ್ದಾರೆ. ನೆರೆ ರಾಷ್ಟ್ರದಲ್ಲಿ ನೀಡಿದ ಕಿರುಕುಳ ಹಾಗೂ ದೌರ್ಜನ್ಯವನ್ನು ಸಹಿಸಲಾಗದೆ ಭಾರತಕ್ಕೆ ಬಂದವರು ಇಂದು ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿದ್ದಾರೆಂದು ತಿಳಿಸಿದ್ದಾರೆ. 
ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ, ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ ಗುರ್​ವೇಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದರು,
ಕೈ ಬರಹವುಳ್ಳ ಘೋಷ ಪಟ್ಟಿಯನ್ನು ಹಿಡಿದು ನಿಂತಿರುವ ಗುರ್​ಮೆಹರ್ ಕೌರ್, ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. ನಾನು ಎಬಿವಿಪಿಯಿಂದ ಭಯಗೊಂಡಿಲ್ಲ. ನಾನು ಒಂಟಿಯಲ್ಲ. ನನ ಜತೆಗೆ ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ಇದ್ದಾರೆ. ಭಾರತದ ಪ್ರತಿಯೊಬ್ಬ ಪ್ರಜೆಗೂ ಮಾತನಾಡುವ ಹಕ್ಕಿದೆ. ವಾದಿಸುವ ಅವಕಾಶವಿದೆ. ಸರಿ ತಪ್ಪುಗಳನ್ನು ವಿಮರ್ಶಿಸುವ ಸ್ವಾತಂತ್ರವಿದೆ. ಇದನ್ನು ರಾಷ್ಟ್ರ, ಸಂಸ್ಕೃತಿ, ಆಚರಣೆ ಇತ್ಯಾದಿ ಮಾನದಂಡಗಳಡಿ ಹತ್ತಿಕ್ಕುವ ಪ್ರಯತ್ನ ಬೇಡ. ಎಬಿವಿಪಿ ಕಾರ್ಯಕರ್ತರು ತಮ್ಮ ಮೇಲೆ ಕಲ್ಲುಗಳನ್ನು ಎಸೆದು ಗಾಯಗೊಳಿಸಬಹುದು. ಆದರೆ ನಮ್ಮ ತತ್ವಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹುತಾತ್ಮ ಯೋಧನ ಪುತ್ರಿ ಬರೆದುಕೊಂಡಿದ್ದಳು.
ಅದಾದ ನಂತರ ಮತ್ತೊಂದು ಪೋಸ್ಟ್ ಹಾಕಿರುವ ಗುರ್ ಮೆಹರ್ ನನ್ನ ಅಪ್ಪನನ್ನು ಪಾಕಿಸ್ತಾನ ಕೊಂದಿಲ್ಲ, ಯುದ್ದ ಅವರನ್ನು ಕೊಂದಿತು ಎಂಬ ಘೋಷಣೆಯುಳ್ಳ ಫೋಟೋ ಹಾಕಿದ್ದಳು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com