ಮದ್ರಾಸ್ ಹೈಕೋರ್ಟ್
ಮದ್ರಾಸ್ ಹೈಕೋರ್ಟ್

ವಿಶ್ವಾಸ ಮತ ಗದ್ದಲ ಪ್ರಕರಣ: ತಮಿಳುನಾಡು ಸಿಎಂಗೆ 'ಹೈ' ನೋಟಿಸ್

ರಾಜಕೀಯ ಬಿಕ್ಕಟ್ಟು ನಿವಾರಿಸಲು ತಮಿಳುನಾಡು ವಿಧಾನಸಭೆಯಲ್ಲಿ ನಡೆಸಲಾಗಿದ್ದ ಅಸಂವಿಧಾನಿಕ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರಿಗೆ ಮದ್ರಾಸ್ ಹೈಕೋರ್ಟ್ ಸೋಮವಾರ ನೋಟಿಸ್...
ಚೆನ್ನೈ: ರಾಜಕೀಯ ಬಿಕ್ಕಟ್ಟು ನಿವಾರಿಸಲು ತಮಿಳುನಾಡು ವಿಧಾನಸಭೆಯಲ್ಲಿ ನಡೆಸಲಾಗಿದ್ದ ಅಸಂವಿಧಾನಿಕ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರಿಗೆ ಮದ್ರಾಸ್ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. 
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದ ಬಳಿಕ ತಮಿಳುನಾಡು ರಾಜಕೀಯದಲ್ಲಿ ಬಿಕ್ಕಟ್ಟು ಎದುರಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ಜೈಲು ಪಾಲಾದ ನಂತರ ಈ ಬಿಕ್ಕಟ್ಟು ಮತ್ತಷ್ಟು ಉಲ್ಭಣಗೊಂಡಿತ್ತು. ಈ ಹಿನ್ನಲೆಯಲ್ಲಿ ಹೆಚ್ಚು ವಿಶ್ವಾಸಮತ ಗಳಿಸಿದ್ದ ಪಳನಿಸ್ವಾಮಿಯವರನ್ನು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ತಮಿಳುನಾಡು ರಾಜ್ಯ ಮುಖ್ಯಮಂತ್ರಿ ಮಾಡಿದ್ದರು.
ವಿಶ್ವಸಮತಯಾಚನೆ ಅಸಂವಿಧಾನಿಕವಾಗಿದೆ ಎಂದು ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳು ವ್ಯಕ್ತಪಡಿಸತೊಡಿದ್ದವು. ಈ ಹಿನ್ನಲೆಯಲ್ಲಿ ವಿಶ್ವಾಸ ಮತಯಾಚನೆ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ, ವಿಧಾನಸಭಾ ಸ್ಪೀಕರ್, ವಿಧಾನಸಭೆ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿಗಳಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 10ರೊಳಗಾಗಿ ಅಫಿಡವಿಟ್ ಸಲ್ಲಿಸುವಂತೆ ಸೂಚನೆ ನೀಡಿದೆ. 

Related Stories

No stories found.

Advertisement

X
Kannada Prabha
www.kannadaprabha.com