ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಪೋಸ್ಟ್ ಗೆ  ಸೆಹ್ವಾಗ್ ಪ್ರತಿಕ್ರಿಯೆ
ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಪೋಸ್ಟ್ ಗೆ ಸೆಹ್ವಾಗ್ ಪ್ರತಿಕ್ರಿಯೆ

ಎರಡು ಬಾರಿ ತ್ರಿಶತಕ ಬಾರಿಸಿದ್ದು ನಾನಲ್ಲ, ನನ್ನ ಬ್ಯಾಟ್ ಮಾಡಿತು; ಹುತಾತ್ಮ ಯೋಧನ ಪುತ್ರಿ ಪೋಸ್ಟ್'ಗೆ ಸೆಹ್ವಾಗ್ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕ್ರಿಯಾಶೀಲವಾಗಿರುವ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಕಾರ್ಗಿಲ್ ಹುತಾತ್ಮ ಯೋಧ ನ ಪುತ್ರಿಯ ಪೋಸ್ಟ್ ಗೆ ಪ್ರತಿಕ್ರಿಯೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕ್ರಿಯಾಶೀಲವಾಗಿರುವ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಕಾರ್ಗಿಲ್ ಹುತಾತ್ಮ ಯೋಧ ನ ಪುತ್ರಿಯ ಪೋಸ್ಟ್ ಗೆ ಪ್ರತಿಕ್ರಿಯೆ ನೀಡುವ ಮೂಲಕ ಬಿರುಗಾಳಿ ಎಬ್ಬಿಸಿದ್ದಾರೆ.

ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ, ಲೇಡಿ ಶ್ರೀ ರಾಮ ಕಾಲೇಜು ವಿದ್ಯಾರ್ಥಿನಿ ಗುರ್​ವೇಹರ್ ಕೌರ್ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದರು,

ಕೈ ಬರಹವುಳ್ಳ ಘೋಷ ಪಟ್ಟಿಯನ್ನು ಹಿಡಿದು ನಿಂತಿರುವ ಗುರ್​ಮೆಹರ್ ಕೌರ್, ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. ನಾನು ಎಬಿವಿಪಿಯಿಂದ ಭಯಗೊಂಡಿಲ್ಲ. ನಾನು ಒಂಟಿಯಲ್ಲ. ನನ ಜತೆಗೆ ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ಇದ್ದಾರೆ. ಭಾರತದ ಪ್ರತಿಯೊಬ್ಬ ಪ್ರಜೆಗೂ ಮಾತನಾಡುವ ಹಕ್ಕಿದೆ. ವಾದಿಸುವ ಅವಕಾಶವಿದೆ. ಸರಿ ತಪ್ಪುಗಳನ್ನು ವಿಮಶಿಸುವ ಸ್ವತಂತ್ರವಿದೆ. ಇದನ್ನು ರಾಷ್ಟ್ರ, ಸಂಸ್ಕೃತಿ, ಆಚರಣೆ ಇತ್ಯಾದಿ ಮಾನದಂಡಗಳಡಿ ಹತ್ತಿಕ್ಕುವ ಪ್ರಯತ್ನ ಬೇಡ. ಎಬಿವಿಪಿ ಕಾರ್ಯಕರ್ತರು ತಮ್ಮ ಮೇಲೆ ಕಲ್ಲುಗಳನ್ನು ಎಸೆದು ಗಾಯಗೊಳಿಸಬಹುದು. ಆದರೆ ನಮ್ಮ ತತ್ವಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹುತಾತ್ಮ ಯೋಧನ ಪುತ್ರಿ ಬರೆದುಕೊಂಡಿದ್ದಳು.

ಅದಾದ ನಂತರ ಮತ್ತೊಂದು ಪೋಸ್ಟ್ ಹಾಕಿರುವ ಗುರ್ ಮೆಹರ್ ನನ್ನ ಅಪ್ಪನನ್ನು ಪಾಕಿಸ್ತಾನ ಕೊಂದಿಲ್ಲ, ಯುದ್ದ ಅವರನ್ನು ಕೊಂದಿತು ಎಂಬ ಘೋಷಣೆಯುಳ್ಳ ಫೋಟೋ ಹಾಕಿದ್ದಾಳೆ. ಅದಕ್ಕೆ  ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ, ನಾನು ದ್ವಿ ಶತಕ ತ್ರಿಶತಕ ಸ್ಕೋರ್ ಮಾಡಿಲ್ಲ, ನನ್ನ ಬ್ಯಾಟ್ ಮಾಡಿತು ಎಂಬ ಬರಹವುಳ್ಳ ಪೋಸ್ಟ್ ಹಾಕಿ ಟ್ವೀಟ್ ಮಾಡಿದ್ದಾರೆ.

ವಿರೇಂದ್ರ ಸೆಹ್ವಾಗ್ ಟ್ವೀಟ್ ಗೆ ಹಲವು ಮಂದಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com