ತಮಿಳುನಾಡು ದೋಣಿ ದುರಂತ; ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ

ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ ಸೋಮವಾರ 10ಕ್ಕೆ ಏರಿಕೆಯಾಗಿದೆ...
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳು
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳು
ಚೆನ್ನೈ: ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ ಸೋಮವಾರ 10ಕ್ಕೆ ಏರಿಕೆಯಾಗಿದೆ. 
ತಮಿಳುನಾಡುನ ಟುಟಿಕೋರಿನ್ ಜಿಲ್ಲೆಯಿಂದ 60 ಕಿ.ಮೀ ದೂರದಲ್ಲಿರುವ ಮನಪ್ಪಾಡೂ ಬೀಚ್'ನಲ್ಲಿ ದೋಣಿ ದುರಂತ ಸಂಭವಿಸಿದ್ದು, 42 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿಬಿದ್ದಿತ್ತು. ಪ್ರವಾಸಕ್ಕೆಂದು ಬಂದಿದ್ದ ಜನರು ಬಂಗಾಳಕೊಲ್ಲಿಯಲ್ಲಿ ದೋಣಿ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಭಾರೀ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದಿತ್ತು. ಈ ವರೆಗೂ 32 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಸಾವನ್ನಪ್ಪಿದ್ದವರ ಸಂಖ್ಯೆ ಇದೀಗ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 
ಮಿತಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕೂರಿಸಿದ ಕಾರಣಕ್ಕೆ ದುರಂತ ಸಂಭವಿಸಿದೆ. ನಿರ್ಲಕ್ಷ್ಯದ ಪರಿಣಾಮ ಘಟನೆ ನಡೆದಿದೆ. ದೋಣಿ ಚಾಲಕನ ಹಾಗೂ ಅದರ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ತಮಿಳುನಾಡು ಮುಖ್ಯಮಂತ್ರಿ ಅಡಪ್ಪಾಡಿ ಕೆ. ಪಳನಿಸ್ವಾಮಿಯವರು ಮೃತರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಹಣವನ್ನು ಪರಿಹಾರವಾಗಿ ಘೋಷಣೆ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com