ಸೇನಾ ಪರೀಕ್ಷಾ ಪೇಪರ್ ಲೀಕ್: ಮೋದಿ ಸರ್ಕಾರದ ವಿರುದ್ಧ ಶಿವಸೇನೆ ವಾಗ್ದಾಳಿ

ಸೇನಾ ಪರೀಕ್ಷೆಯ ಪೇಪರ್ ಲೀಕ್ ಪ್ರಕರಣದಿಂದ ನರೇಂದ್ರ ಮೋದಿ ಸರ್ಕಾರದ ಗೌರವಕ್ಕೆ ಧಕ್ಕೆಯಾಗಿದೆ ಎಂದಿರುವ ಮಿತ್ರ ಪಕ್ಷ ಶಿವಸೇನೆ...
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಮುಂಬೈ: ಸೇನಾ ಪರೀಕ್ಷೆಯ ಪೇಪರ್ ಲೀಕ್ ಪ್ರಕರಣದಿಂದ ನರೇಂದ್ರ ಮೋದಿ ಸರ್ಕಾರದ ಗೌರವಕ್ಕೆ ಧಕ್ಕೆಯಾಗಿದೆ ಎಂದಿರುವ ಮಿತ್ರ ಪಕ್ಷ ಶಿವಸೇನೆ, ಇದರ ಹೊಣೆಯನ್ನು ಬಿಜೆಪಿ ಹೊತ್ತುಕೊಳ್ಳಬೇಕು ಎಂದು ಮಂಗಳವಾರ ಆಗ್ರಹಿಸಿದೆ.
ಇದೇ ವೇಳೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿರುವ ಶಿವಸೇನೆ, ಮತ್ತೆ ಗೋವಾ ಮುಖ್ಯಮಂತ್ರಿಯಾಗಲು ಹೊರಟಿರುವ ಪರಿಕ್ಕರ್ ಅವರು ಮೊದಲು ರಕ್ಷಣಾ ಸಚಿವರಾಗಿ ಸರಿಯಾಗಿ ಕೆಲಸ ಮಾಡಲಿ ಎಂದು ವ್ಯಂಗ್ಯವಾಡಿದೆ.
ವಿಶ್ವವಿದ್ಯಾಲಯಗಳ ಮತ್ತು ಇತರೆ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದು ಸಾಮಾನ್ಯ. ಆದರೆ ಸೇನಾ ನೇಮಕಾತಿಯ ಪ್ರಶ್ನೆ ಪತ್ರಿಕೆಯೂ ಸುರಕ್ಷಿತವಲ್ಲ ಎಂಬುದು ಈಗ ಸಾಬೀತಾಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಸೈನಿಕರು ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡುತ್ತಿರುವ ಸಂದರ್ಭದಲ್ಲಿ ಸೇನಾ ಪರೀಕ್ಷೆಯ ಪೇಪರ್ ಲೀಕ್ ಆಗಿರುವುದು ಮೋದಿ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ವಿವರಿಸಿದೆ.
ಸೇನಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಕಳೆದ ಫೆ.25ರಂದು ಪೊಲೀಸರು ಮುಂಬೈ ಮತ್ತು ಗೋವಾದ ಹಲವು ಕಡೆ ದಾಳಿ ನಡೆಸಿದ್ದು, 18 ಆರೋಪಿಗಳನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com