ರಾಹುಲ್ ಗಾಂಧಿ ಭೇಟಿಗೂ ಮುನ್ನ ಇಂಫಾಲ್ ದಲ್ಲಿ ಬಾಂಬ್ ಪತ್ತೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಣಿಪುರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸುವ ಮುನ್ನ ಇಂಫಾಲ್ ದಲ್ಲಿ....
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಇಂಫಾಲ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಣಿಪುರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸುವ ಮುನ್ನ ಇಂಫಾಲ್ ದಲ್ಲಿ ಬಾಂಬ್ ಪತ್ತೆಯಾಗಿ ಆತಂಕ ಸೃಷ್ಟಿ ಮಾಡಿದೆ.
ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಇಂಫಾಲ್ ಪೂರ್ವ ಜಿಲ್ಲೆಯ ಖೊಂಗಮನ್ ಬಶಿಖೊಂಗ್ ತುರೆಲ್ ಮಪಲ್ ಪ್ರದೇಶದಲ್ಲಿ ಬಾಂಬ್ ಪತ್ತೆಯಾಗಿದ್ದು, ಅದನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ರ್ಯಾಲಿ ಉದ್ದೇಶಿಸಿ ಮಾತನಾಡಲಿರುವ ಸ್ಥಳದಿಂದ 6 ಕಿ.ಮೀ ದೂರದಲ್ಲಿ ಈ ಬಾಂಬ್ ಪತ್ತೆಯಾಗಿದೆ. 
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಇಂದು ಕಂಗಜಿಬಂಗ್ ಮೈದಾನದಲ್ಲಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com