ತೆಂಗಿನಕಾಯಿ ಜೂಸ್, ಆಲುಗಡ್ಡೆ ಕೈಗಾರಿಕೆ ಹೇಳಿಕೆ: ರಾಹುಲ್ ಬಗ್ಗೆ ಪ್ರಧಾನಿ ಮೋದಿ ವ್ಯಂಗ್ಯ
ಮಣಿಪುರದ ಸಾರ್ವಜನಿಕ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರ ತೆಂಗಿನ ಕಾಯಿ ಜ್ಯೂಸ್ ಹಾಗೂ ಆಲು ಗಡ್ಡೆ ಕೈಗಾರಿಕೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.

Published On :
ಮಹಾರಾಜಗಂಜ್: ಮಣಿಪುರದ ಸಾರ್ವಜನಿಕ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರ ತೆಂಗಿನ ಕಾಯಿ ಜ್ಯೂಸ್ ಹಾಗೂ ಆಲು ಗಡ್ಡೆ ಕೈಗಾರಿಕೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನಾಯಕರೊಬ್ಬರಿದ್ದಾರೆ. ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ. ಅವರು ಇತ್ತೀಚೆಗಷ್ಟೇ ಮಣಿಪುರದಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದರು. ತೆಂಗಿನ ಕಾಯಿಯಿಂದ ಜ್ಯೂಸ್ ತೆಗೆದು ಅದನ್ನು ಲಂಡನ್ ಗೆ ರಫ್ತು ಮಾಡುವುದಾಗಿ ಹೇಳಿಕೆ ನೀಡಿದ್ದರು. ಆದರೆ ವಾಸ್ತವದಲ್ಲಿ ತೆಂಗಿನಕಾಯಿಯಲ್ಲಿ ಉತ್ಪತ್ತಿಯಾಗುವುದು ಎಳನೀರು ಜ್ಯೂಸ್ ಅಲ್ಲ, ಹಾಗೂ ತೆಂಗಿನಕಾಯಿ ಹೆಚ್ಚು ಬೆಳೆಯುವ ರಾಜ್ಯ ಕೇರಳ ಎಂದು ಪ್ರಧಾನಿ ಹೇಳಿದ್ದಾರೆ.
ಇನ್ನು ಉತ್ತರ ಪ್ರದೇಶದಲ್ಲಿ ಆಲುಗಡ್ಡೆ ಕೈಗಾರಿಕೆಯನ್ನು ಪ್ರಾರಂಭಿಸುವುದರ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ನರೇಂದ್ರ ಮೋದಿ, ರಾಹುಲ್ ಗಾಂಧಿ ಅತ್ಯಂತ ಬುದ್ಧಿವಂತ, ದೂರದೃಷ್ಟಿಯುಳ್ಳ ನಾಯಕನಾಗಿದ್ದಾರೆ ಎಂದಿದ್ದು, ಉತ್ತರ ಪ್ರದೇಶಕ್ಕೆ ರಾಹುಲ್ ಗಾಂಧಿ ನಿಖರವಾಗಿ ಏನನ್ನು ಮಾಡಲು ಬಯಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


