ಮದ್ಯ ನಿಷೇಧ ವಿರುದ್ಧದ ಅರ್ಜಿ ವರ್ಗಾವಣೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಬಿಹಾರ ಸರ್ಕಾರ

ಮದ್ಯ ನಿಷೇಧದ ವಿರುದ್ಧ ಪಾಟ್ನಾ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ವರ್ಗಾವಣೆ ಮಾಡುವಂತೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಮದ್ಯ ನಿಷೇಧದ ವಿರುದ್ಧ ಪಾಟ್ನಾ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ವರ್ಗಾವಣೆ ಮಾಡುವಂತೆ ಕೋರಿ ಸೋಮವಾರ ಬಿಹಾರ ಸರ್ಕಾರ ಸಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಬಿಹಾರ ಸರ್ಕಾರದ ಅರ್ಜಿ ವಿಚಾರಣೆಗೆ ಸ್ವೀಕರಿಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಮದ್ಯ ಉತ್ಪಾದನಾ ಕಂಪನಿಗಳ ಒಕ್ಕೂಟಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಮುಂಚೆ ಮದ್ಯ ಉತ್ಪಾದನಾ ಕಂಪನಿಗಳು ಮದ್ಯ ನಿಷೇಧದ ವಿರುದ್ಧ ಪಾಟ್ನಾ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮದ್ಯ ನಿಷೇಧ ಕಾನೂನನ್ನೇ ರದ್ದುಗೊಳಿಸಿತ್ತು. ಆದರೆ ಕಳೆದ ಅಕ್ಟೋಬರ್ ನಲ್ಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com