ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್

ಸಮಾಜವಾದಿ ಪಕ್ಷದಲ್ಲಿ ಬಿರುಕು: ಅನಾರೋಗ್ಯಕ್ಕೀಡಾದ ಮುಲಾಯಂ

ದಿನದಿಂದ ದಿನಕ್ಕೆ ಸಮಾಜವಾದಿ ಪಕ್ಷದಲ್ಲಾಗುತ್ತಿರುವ ಬೆಳವಣಿಗೆಗಳಿಂದಾಗಿ ಮುಲಾಯಂ ಸಿಂಗ್ ಯಾದವ್ ಅವರ ತಲೆ ಬಿಸಿಯಾಗತೊಡಗಿದ್ದು, ಇದೀಗ ಅನಾರೋಗ್ಯಕ್ಕೀಡಾಗಿದ್ದಾರೆಂದು...

ಲಖನೌ: ದಿನದಿಂದ ದಿನಕ್ಕೆ ಸಮಾಜವಾದಿ ಪಕ್ಷದಲ್ಲಾಗುತ್ತಿರುವ ಬೆಳವಣಿಗೆಗಳಿಂದಾಗಿ ಮುಲಾಯಂ ಸಿಂಗ್ ಯಾದವ್ ಅವರ ತಲೆ ಬಿಸಿಯಾಗತೊಡಗಿದ್ದು, ಇದೀಗ ಅನಾರೋಗ್ಯಕ್ಕೀಡಾಗಿದ್ದಾರೆಂದು ತಿಳಿದುಬಂದಿದೆ.

ಮುಲಾಯಂ ಅವರು ಅತಿಯಾದ ರಕ್ತದೊತ್ತಡದಿಂದ ಬಳಲುತ್ತಿದ್ದು, ವೈದ್ಯರ ತಂಡ ಇದೀಗ ಮುಲಾಯಂ ಅವರ ನಿವಾಸಕ್ಕೆ ದೌಡಾಯಿಸಿದ್ದು, ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಉಚ್ಛಾಟನೆ ಆದೇಶ ವಾಪಸ್ ಪಡೆದ ನಂತರ, ಶನಿವಾರ ಮತ್ತೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರು ಲಖನೌನಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದ್ದರು. ಸಮಾವೇಶದಲ್ಲಿ ಅಖಿಲೇಶ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ, ಪಕ್ಷದ ಹಾಲಿ ರಾಷ್ಟ್ರೀ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರನ್ನು ಮಾರ್ಗದರ್ಶಕ ಎಂದು ಘೋಷಿಸಿದ್ದರು. ಇದೇ ಸಮಾವೇಶದಲ್ಲಿ ಮುಲಾಯಂ ಬಣದ ಅಮರ್ ಸಿಂಗ್ ಹಾಗೂ ಸಹೋದರ ಶಿವಪಾಲ್ ಯಾದವ್ ಅವರನ್ನು ಪಕ್ಷದಿಂದ ಉಚ್ಛಾಟಿಸುವ ತೀರ್ಮಾನ ಕೈಗೊಳ್ಳುತ್ತಿದ್ದಂತೆಯೇ ಉಭಯ ಬಣಗಳ ನಡುವೆ ಗಲಾಟೆ ಆರಂಭವಾಗಿದೆ.

ಇನ್ನು ನಿರ್ಧಾರವನ್ನು ಅಖಿಲೇಶ್ ಯಾದವ್ ಅವರು ಸಮರ್ಥಿಸಿಕೊಂಡಿದ್ದು, ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನಾವು ಪ್ರೀತಿಸುವವರನ್ನು ರಕ್ಷಣೆ ಮಾಡುವ ಸಲುವಾಗಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಇಂದು ನಾನು ತೆಗೆದುಕೊಂಡಿರುವ ನಿರ್ಧಾರ ಕಠಿಣವಾಗಿದೆ. ಆದರೆ, ನಿರ್ಧಾರ ತೆಗೆದುಕೊಳ್ಳಲೇಬೇಕಾದ ಅನಿವಾರ್ಯತೆ ಇತ್ತು ಎಂದು ಹೇಳಿಕೊಂಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com