ಕೇರಳದಲ್ಲಿ ಭೀಕರ ಅಪಘಾತ; 20 ಮಂದಿ ಭಕ್ತರಿಗೆ ಗಂಭೀರ ಗಾಯ

ಕೇರಳದ ಪಥನಪುರಂ ಬಳಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ದರ್ಶನಕ್ಕೆಂದು ತೆರಳುತ್ತಿದ್ದ ಸುಮಾರು 20 ಮಂದಿ ಮಲಾಧಾರಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ತಿರುವನಂತಪುರಂ: ಕೇರಳದ ಪಥನಪುರಂ ಬಳಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ದರ್ಶನಕ್ಕೆಂದು ತೆರಳುತ್ತಿದ್ದ ಸುಮಾರು 20 ಮಂದಿ ಮಲಾಧಾರಿಗಳು ಗಾಯಗೊಂಡಿದ್ದಾರೆ ಎಂದು  ತಿಳಿದುಬಂದಿದೆ.

ಗಾಯಾಳು ಭಕ್ತರನ್ನು ಸಮೀಪ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾದುತ್ತಿದೆ. ಮೂಲಗಳ ಪ್ರಕಾರ ಗಾಯಾಳು ಭಕ್ತಾದಿಗಳು ತಮಿಳುನಾಡಿನ ಮೂಲದವರಾಗಿದ್ದು, ಕೇರಳದಲ್ಲಿರುವ ಪವಿತ್ರ ಕ್ಷೇತ್ರ  ಶಬರಿಮಲೆಗೆ ಆಗಮಿಸುತ್ತಿದ್ದರು. ಈ ವೇಳೆ ಭಕ್ತರಿದ್ದ ವ್ಯಾನ್ ಲಾರಿಗೆ ಢಿಕ್ಕಿ ಹೊಡೆದಿದ್ದು, ವ್ಯಾನ್ ನಲ್ಲಿದ್ದ ಎಲ್ಲ ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ 18 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು  ಮಾಡಲಾಗಿದ್ದು, ಇಂದು ಮುಂಜಾನೆ ಮತ್ತಿಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಕರ ಸಂಕ್ರಾಂತಿ ನಿಮಿತ್ತ ಶಬರಿಮಲೆಯಲ್ಲಿ ಮಂಡಲ ಪೂಜೆ ನೆರವೇರುತ್ತಿದ್ದು, ದೇವಾಲಯಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಮಕರ ಪೂಜೆ ಸಂದರ್ಭದಲ್ಲಿ ಉಂಟಾಗಿದ್ದ  ಕಾಲ್ತುಳಿತದಿಂದಾಗಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com