ದೇಶ

ಸುಪ್ರೀಂ ಕೋರ್ಟ್ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಪೇದೆ!

ಸುಪ್ರೀಂ ಕೋರ್ಟ್ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಪೇದೆ!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿಯ ಸುಪ್ರೀಂ ಕೋರ್ಟ್ ಆವರಣದಲ್ಲಿ ಕಾರ್ಯ ನಿರತ ಮುಖ್ಯಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ.

ಸೋಮವಾರ ಬೆಳಗ್ಗೆ ಸುಪ್ರೀಂ ಕೋರ್ಟ್ ನ ಆವರಣದಲ್ಲಿ ಭದ್ರತೆಯ ಮೇಲ್ವಿಚಾರಣೆ ನಡೆಸುತ್ತಿದ್ದ ದೆಹಲಿ ಪೊಲೀಸ್ ಮುಖ್ಯಪೇದೆ ಚಾಂದ್ ಪಾಲ್ ಎಂಬುವವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡುಹಾರಿಸಿಕೊಂಡು  ಸಾವನ್ನಪ್ಪಿದ್ದಾರೆ. ಗುಂಡಿನ ಶಬ್ದ ಕೇಳುತ್ತಿದ್ದಂತೆಯೇ ಸಮೀಪಕ್ಕೆ ದೌಡಾಯಿಸಿದ ಇತರೆ ಪೊಲೀಸರು ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಅಷ್ಟು ಹೊತ್ತಿಗಾಗಲೇ ಪೊಲೀಸ್ ಪೇದೆ ಚಾಂದ್ ಪಾಲ್ ಸಾವನ್ನಪ್ಪಿದ್ದರು ಎಂದು  ತಿಳಿದುಬಂದಿದೆ.

ಚಾಂದ್ ಪಾಲ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್ ಆವರಣದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.