
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಸಿಆರ್'ಪಿಎಫ್ ಅಧಿಕಾರಿಯೊಬ್ಬರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಬಿಎನ್ ಠಾಕೂರ್ ಅವರು ಮುರಾನ್ ಚೌಕ್ ಬಳಿ ಕರ್ತವ್ಯ ನಿರತರಾಗಿದ್ದ ವೇಳೆ ಉಗ್ರರು ಠಾಕೂರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಉಗ್ರರು ಬಹಳ ಹತ್ತಿರದಿಂದಲೇ ಠಾಕೂರ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡ ಅಧಿಕಾರಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಗ್ರರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement