ಅಗ್ನಿ ಆಕಸ್ಮಿಕದಿಂದಾಗಿ ರೋಗಿಗಳು ಹಾಗೂ ಅವರನ್ನು ನೋಡಿಕೊಳ್ಳುವ ದಾದಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದು, ರೋಗಿಗಳ ಸಂಬಂಧಿಕರು ಹಾಗೂ ಆಸ್ಪತ್ರೆ ಸಿಬ್ಬಂದಿ ಅವರನ್ನು ಕಟ್ಟಡದಿಂದ ಸ್ಥಳಾಂತರಿಸಲು ಪರದಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ರಕ್ಷಣಾ ಸಿಬ್ಬಂದಿ ಆಂಬುಲೆನ್ಸ್ ಮೂಲಕ ರೋಗಿಗಳನ್ನು ಬೆರೆ ಆಸ್ಪತ್ರೆಗೆ ಸ್ಥಳಾಂತರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.