ತುಂಡುಡುಗೆ ಹೇಳಿಕೆ: ಪ್ರಚಾರಕ್ಕಾಗಿ ಎಸ್'ಪಿ ವಿವಾದಾತ್ಮಕ ಹೇಳಿಕೆ ನೀಡುತ್ತಿದೆ- ಕಾಂಗ್ರೆಸ್

ಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ನೀಡಿದ್ದ ಹೇಳಿಕೆ ಕೇವಲ ಪ್ರಚಾರಕ್ಕಾಗಿ ಆಗಿದೆ ಎಂದು ಕಾಂಗ್ರೆಸ್ ಬುಧವಾರ...
ಕಾಂಗ್ರೆಸ್ ನಾಯಕ ರಾಜ್ ಬಬ್ಬರ್
ಕಾಂಗ್ರೆಸ್ ನಾಯಕ ರಾಜ್ ಬಬ್ಬರ್
Updated on

ಲಖನೌ: ಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ನೀಡಿದ್ದ ಹೇಳಿಕೆ ಕೇವಲ ಪ್ರಚಾರಕ್ಕಾಗಿ ಆಗಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರು, ಸಮಾಜವಾದಿ ಪಕ್ಷಕ್ಕೆ ಈ ರೀತಿಯ ಹೇಳಿಕೆ ನೀಡುವುದು ಅಭ್ಯಾಸವಾಗಿ ಹೋಗಿದೆ. ಕೆಲವೊಮ್ಮೆ ಹಿರಿಯ ಸಚಿವರು ಹಾಗೂ ಇನ್ನೂ ಕೆಲವೊಮ್ಮೆ ಕಿರಿಯ ಸಚಿವರು ಹೇಳಿಕೆಗಳನ್ನು ನೀಡುತ್ತಿರುತ್ತಾರೆಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಸಾಕಷ್ಟು ಸಚಿವರಿಗೆ ಪ್ರಸ್ತುತ ಸರಿಯಾದ ಪ್ರಚಾರಗಳು ಸಿಗುತ್ತಿಲ್ಲ. ಹೀಗಾಗಿ ಇಂತಹ ಪ್ರಕರಣಗಳನ್ನು ಬಳಸಿಕೊಂಡು ಸುದ್ದಿಗೆ ಬರಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.

ಹೊಸವರ್ಷಾಚರಣೆ ಸಂಭ್ರಮದ ವೇಳೆ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಅವರು, ಲೈಂಗಿಕ ಕಿರುಕುಳಕ್ಕೆ ಮಹಿಳೆಯರ ತುಂಡುಡಿಗೆಯೇ ಕಾರಣ. ಆಕರ್ಷಕವಾಗಿ ಕಾಣುವ ಸಲುವಾಗಿ ಮಹಿಳೆಯರು ತುಂಡುಡುಗೆಯನ್ನು ತೊಡುತ್ತಾರೆ. ಇಂತಹ ಮಹಿಳೆಯೇ ಇಂದು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಭದ್ರತೆ ಒದಗಿಸಲು ಸಾಧ್ಯವಿಲ್ಲ. ಸ್ವತಃ ನಾವೇ ನಮ್ಮ ಭದ್ರತೆ ಬಗ್ಗೆ ಕಾಳಜಿ ವಹಿಸಬೇಕು. ಹಾಗಂತ ನಾನು ಮಹಿಳಾ ವಿರೋಧಿಯಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com