ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಸುಬ್ರಹ್ಮಣ್ಯ ಸ್ವಾಮಿ ಆಗ್ರಹ

ಕೋಲ್ಕತಾದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಅಗತ್ಯವಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ...
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ
Updated on: 

ನವದೆಹಲಿ: ಕೋಲ್ಕತಾದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಅಗತ್ಯವಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಹೇಳಿದ್ದಾರೆ.

ಕೋಲ್ಕತಾದಲ್ಲಿ ಬಿಜೆಪಿ ಕಚೇರಿ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದು, ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಕೋಲ್ಕತಾದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಇಂತಹ ಸಂದರ್ಭದಲ್ಲಿ ಕಲಂ 256 ಬಳಕೆ ಮಾಡುವ ಸಂದರ್ಭ ಎದುರಾಗಿದೆ. ಕೂಡಲೇ ಕೇಂದ್ರ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ ಇಲ್ಲವೇ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿಕೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕಿದೆ ಎಂದು ಹೇಳಿದ್ದಾರೆ.

ಸಂವಿಧಾನದಲ್ಲಿ ಕಲಂ 247 ಇದ್ದು, ಸರ್ಕಾರ ಇದನ್ನೂ ಕೂಡ ಬಳಕೆ ಮಾಡಬಹುದಾಗಿದೆ. ಹಿರಿತನದ ಆಧಾರದ ಮೇಲೆ ಜಿಲ್ಲಾ ಮ್ಯಾಜಿಸ್ಟೇಟ್ ರನ್ನು ನೇಮಕ ಮಾಡಿ ಹಿಂಸಾಚಾರ ಸೃಷ್ಟಿಸುತ್ತಿರುವವರ ವಿರುದ್ಧ ವಾರೆಂಟ್ ಜಾರಿ ಮಾಡಬಹುದಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದ್ದು, ಮುಖ್ಯಮಂತ್ರಿಗಳು ಮುಖ್ಯ ತಲೆಯಾಗಿರುತ್ತಾರೆ. ಆಡಳಿತಾರೂಡ ಪಕ್ಷ ವಿರೋಧ ಪಕ್ಷಗಳ ಮೇಲೆ ದಾಳಿ ಮಾಡಿದರೆ, ಕೂನೂನು ಸುವ್ಯವಸ್ಥೆ ಹಾಳಾಗುತ್ತದೆ. ನನ್ನ ಪ್ರಕಾರ ಕೇಂದ್ರ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲೇಬೇಕಾಗಿದೆ ಎಂದು ತಿಳಿಸಿದ್ದಾರೆ.

ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧನಕ್ಕೊಳಪಡಿಸುತ್ತಿದ್ದಂತೆ ಪಶ್ಚಿಮಬಂಗಾಳದಲ್ಲಿ ರಾಜಕೀಯ ಹಗ್ಗಜಗ್ಗಾಟ ತಾರಕ್ಕೇರಿದೆ.

ಬಂಡೋಪಾಧ್ಯಾಯ ಅವರನ್ನು ಸಿಬಿಐ ಅಧಿಕಾರಿಗಳು ಬಂಧನಕ್ಕೊಳಪಡಿಸಿದ ಬೆನ್ನಲ್ಲೇ ಟಿಎಂಸಿ ಪಕ್ಷದ ಸಾವಿರಾರು ಕಾರ್ಯಕರ್ತರು ಕೋಲ್ಕತಾದಲ್ಲಿರುವ ಬಿಜೆಪಿ ಕಚೇರಿ ಮೇಲೆ ಏಕಾಏಕಿ ದಾಳಿ ನಡೆಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಘಟನೆಯಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದರು. ಇದಾದ ಬಳಿಕ ನಿನ್ನೆ ರಾತ್ರಿ ಕೂಡ ಬಿಜೆಪಿ ನಾಯಕಿ ಕೃಷ್ಣ ಭಟ್ಟಾಚಾರ್ಯ ಅವರ ನಿವಾಸದ ಮೇಲೂ ಟಿಎಂಸಿ ಕಾರ್ಯಕರ್ತರು ದಾಳಿ ಮಾಡಿದ್ದರು. ಈ ವೇಳೆ ಭಟ್ಟಾಚಾರ್ಯ ಅವರಿಗೆ ಮನಬಂದಂತೆ ಥಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com