ಭುವನೇಶ್ವರ: ಸೂಕ್ತ ದಾಖಲೆಗಳಿಲ್ಲದ 6 ಲಕ್ಷ ರುಪಾಯಿ ಹಣ ಸಾಗಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ನಗರದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಬಂದಿಳಿದ ವ್ಯಕ್ತಿಯನ್ನು ಸಿಐಎಸ್ಎಫ್ ಸಿಬ್ಬಂದಿ ಬಂಧಿಸಿ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ವ್ಯಕ್ತಿ ಬ್ಯಾಗ್ ನಲ್ಲಿ ಹಳೆ 500, 1000 ರುಪಾಯಿ ನೋಟ್ ಹಾಗೂ ಹೊಸ 2000 ರುಪಾಯಿ ಮುಖಬೆಲೆಯ ನೋಟ್ ಗಳಿದ್ದವು ಎನ್ನಲಾಗಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದೆ.