ನಮ್ಮನ್ನು ಕಂಡರೆ ಏಕೆ ಹೆದರುತ್ತೀರಿ?: ಪ್ರಧಾನಿಗೆ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಸಿಬಿಐ ವಿರುದ್ಧ ಕಿರುಕುಳ ನೀಡುತ್ತಿರುವ ಆರೋಪ ಮಾಡಿದ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಸಿಬಿಐ ವಿರುದ್ಧ ಕಿರುಕುಳ ನೀಡುತ್ತಿರುವ ಆರೋಪ ಮಾಡಿದ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಸಿಬಿಐ ಅಧಿಕಾರಿಗಳು ನನ್ನ ಕಚೇರಿ ಮೇಲೆ ದಾಳಿ ನಡೆಸುತ್ತಾರೆ. ಅಧಿಕಾರಿಗಳು ನನ್ನ ವಿರುದ್ಧ ಆರೋಪ ಹೊರಿಸಲು ಯತ್ನಿಸುತ್ತಾರೆ. ಅಷ್ಟೇ ಅಲ್ಲದೇ ಸಿಬಿಐ ಅಧಿಕಾರಿಗಳು ಸತ್ಯೇಂದ್ರ ಜೈನ್ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ನಮ್ಮನ್ನು ಕಂಡರೆ ಏಕೆ ಹೆದರುತ್ತೀರಿ ಮೋದಿಜಿ? ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಸಿಬಿಐ ಅಧಿಕಾರಿಗಳು ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸಿಎಂ ಕೇಜ್ರಿವಾಲ್ ಅವರ ಹೆಸರನ್ನು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದ ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್, ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ.