ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ

ದುಷ್ಕರ್ಮಿಗಳು 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಿಗ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಮುಂಬೈ: ದುಷ್ಕರ್ಮಿಗಳು 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಿಗ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಭಿಲವಡಿಯಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಜನವರಿ 5ರಂದೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಿಲವಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಳವಳ್ಳಿ ಗ್ರಾಮದ ರಸ್ತೆ ಬದಿಯಲ್ಲಿದ್ದ ಬಾಲಕಿಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಯ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com