ದೇಶ

ಮುಂಬೈ: ಕಪಾಡಿಯಾ ಬಜಾರ್'ನಲ್ಲಿ ಅಗ್ನಿ ಅವಘಡ

ಮುಂಬೈ: ಕಪಾಡಿಯಾ ಬಜಾರ್'ನಲ್ಲಿ ಅಗ್ನಿ ಅವಘಡ
ಸಾಂದರ್ಭಿಕ ಚಿತ್ರ
Published On :

ಮುಂಬೈ: ಮುಂಬೈ'ನ ಕುರ್ಲಾದಲ್ಲಿರುವ ಕಪಾಡಿಯಾ ಬಜಾರ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ಶನಿವಾರ ತಿಳಿದುಬಂದಿದೆ.

ಇಂದು ಬೆಳ್ಳಂಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ಅಗ್ನಿ ಅವಘಡದಿಂದಾಗಿ ಕೆಲ ಅಂಗಡಿಗಳು ಭಸ್ಮವಾಗಿದ್ದು, ಗೋಡನ್ ನಲ್ಲಿದ್ದ ಸೀರೆ ಹಾಗೂ ಇನ್ನಿತರೆ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.