

ಲಕ್ನೋ: ಕುಡಿದ ಮತ್ತಿನಲ್ಲಿ ಗುಡಿಸಲಿಗೆ ಕಾರು ನುಗ್ಗಿಸಿದ ಪರಿಣಾಮ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಆರೋಪಿಗಳು ಕಾರು ಸಮೇತ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಲಕ್ನೋದ ದಲಿಭಾಗ್ ಪ್ರದೇಶದಲ್ಲಿ ಇಂದು ಮುಂಜಾನೆ ಕೂಲಿ ಕಾರ್ಮಿಕರು ನಿದ್ರಿಸುತ್ತಿದ್ದ ಗುಡಿಸಲಿಗೆ ವೇಗವಾಗಿ ಬಂದ ಕಾರು ನುಗ್ಗಿದೆ. ನಿದ್ರಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದ ಎಲ್ಲಾ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅವರಲ್ಲಿ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳಿದ ಮೂವರು ನಾಪತ್ತೆಯಾಗಿದ್ದಾರೆ.
ಘಟನೆ ನಡೆದಾಗ ಕಾರು ಚಲಾಯಿಸುತ್ತಿದ್ದ ಡ್ರೈವರ್ ಸೇರಿ ಎಲ್ಲರು ಕುಡಿದ ಮತ್ತಿನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಕಾರು ಚಲಾಯಿಸಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.