ರಕ್ಷಣಾ ದೃಷ್ಠಿಯಿಂದ ಮಹಿಳೆಯರು ದೆಹಲಿ ಮೆಟ್ರೋದಲ್ಲಿ ಚೂರಿ ತೆಗೆದುಕೊಂಡು ಹೋಗಲು ಅನುಮತಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ಮೆಟ್ರೋ ರೈಲುಗಳಲ್ಲಿ ಸಂಚರಿಸುವ ಮಹಿಳೆಯರು ಭದ್ರತೆಯ ದೃಷ್ಠಿಯಿಂದ....
ದೆಹಲಿ ಮೆಟ್ರೋ
ದೆಹಲಿ ಮೆಟ್ರೋ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ಮೆಟ್ರೋ ರೈಲುಗಳಲ್ಲಿ ಸಂಚರಿಸುವ ಮಹಿಳೆಯರು ಭದ್ರತೆಯ ದೃಷ್ಠಿಯಿಂದ ತಮ್ಮ ಬಳಿ ಸಣ್ಣ ಚೂರಿಗಳನ್ನು ಇಟ್ಟುಕೊಳ್ಳಬಹುದಾಗಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಮೆಟ್ರೋ ರೈಲುಗಳಲ್ಲಿ ಸಂಚರಿಸುವ ಮಹಿಳೆಯರು ಮೆಟ್ರೋ 4 ಇಂಚುಗಳಿಗಿಂತ ಕಡಿಮೆ ಉದ್ದ ಚಾಕು ಇಟ್ಟುಕೊಳ್ಳಲು ಅವಕಾಶ ನೀಡಿದೆ.

ಈ ಹಿಂದೆ ವಸ್ತುಗಳನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಈ ವಸ್ತುಗಳನ್ನು ಜಪ್ತಿ ಮಾಡಲಾಗುತ್ತಿತ್ತು. ಆದರೆ ಇದೀಗ ಮಹಿಳೆಯರು ರಕ್ಷಣೆಗಾಗಿ ಚೂರಿಯನ್ನು ಇಟ್ಟುಕೊಳ್ಳಬಹುದು ಎಂದು ಸಿಐಎಸ್ಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com