ಭಯೋತ್ಪಾದನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಕಠಿಣ ಕ್ರಮ ಕೈಗೊಳ್ಳಬೇಕು: ರಕ್ಷಣಾ ತಜ್ಞರು

ಜಮ್ಮುವಿನ ಜನರಲ್ ರಿಸರ್ವ್ ಎಂಜಿನಿಯರಿಂಗ್ ಪೋರ್ಸ್ (ಜಿಆರ್ ಇಎಫ್ ) ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ತಜ್ಞರು ಖಂಡನೆ ವ್ಯಕ್ತಪಡಿಸಿದ್ದು, ಭಯೋತ್ಪಾನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಕಠಿಣ ಕ್ರಮ ಕೈಗೊಳ್ಳಬೇಕೆಂದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಮ್ಮುವಿನ  ಜನರಲ್ ರಿಸರ್ವ್ ಎಂಜಿನಿಯರಿಂಗ್ ಪೋರ್ಸ್ (ಜಿಆರ್ ಇಎಫ್ ) ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ತಜ್ಞರು ಖಂಡನೆ ವ್ಯಕ್ತಪಡಿಸಿದ್ದು, ಭಯೋತ್ಪಾನೆ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೋಮವಾರ ಆಗ್ರಹಿಸಿದ್ದಾರೆ.

ಅಖ್ನೂರ್ ನಲ್ಲಿ ನಡೆದ ಉಗ್ರರ ದಾಳಿ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ರಕ್ಷಣಾ ತಜ್ಞ ಖಮರ್ ಅಘಾ ಅವರು, ಪಾಕಿಸ್ತಾನ ಸೇನೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದು ಹಾಗೂ ಭಯೋತ್ಪಾದಕರಿಗೆ ಆರ್ಥಿಕ ನೆರವು, ತರಬೇತಿ ನೀಡುತ್ತಿದೆ. ಅಲ್ಲದೆ, ಗಡಿ ದಾಟಿ ಭಾರತದೊಳಗೆ ನುಸುಳಲು ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದೆ. ಪಾಕಿಸ್ತಾನ ನೇರವಾಗಿ ಉಗ್ರರಿಗೆ ಸಹಾಯ ಮಾಡುತ್ತಿದ್ದು, ಇದರಲ್ಲಿ ಯಾವುದೇ ಸಂಶಯಗಳಿಲ್ಲ. ಹೀಗಾಗಿ ಭಯೋತ್ಪಾದನೆ ವಿರುದ್ಧ ವಿಶ್ವ ಸಮುದಾಯ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದಾಳಿ ನಡೆಯುತ್ತಿರುವುದು ಇದು ಮೊದಲೇನಲ್ಲ. ಕಳೆದ ವರ್ಷ ಉಗ್ರರು ಭಾರತದ ಮೇಲೆ ಸಾಕಷ್ಟು ದಾಳಿಗಳನ್ನು ಮಾಡಿದ್ದಾರೆ. ಈ ರೀತಿಯ ಬೆಳವಣಿಗೆಗಳ ವಿರುದ್ಧ ಅಂತರಾಷ್ಟ್ರೀಯ ಸಮುದಾಯ ಖಂಡನೆ ವ್ಯಕ್ತಪಡಿಸಬೇಕಿದೆ. ದಾಳಿಗೆ ಪಾಕಿಸ್ತಾನವೇ ನೇರ ಹೊಣೆಯಾಗಿದೆ. ಏಕೆಂದರೆ, ಉಗ್ರರು ಪಾಕಿಸ್ತಾನದಲ್ಲಿಯೇ ತರಬೇತಿಯನ್ನು ಪಡೆಯುತ್ತಿದ್ದು, ಭಾರತದ ಮೇಲೆ ದಾಳಿ ನಡೆಸಲು ಉಗ್ರರಿಗೆ ಪಾಕಿಸ್ತಾನ ಸೇನೆಯೇ ಕುಮ್ಮಕ್ಕು ನೀಡುತ್ತಿದೆ. ಮುಗ್ಧ ಸೇನಾ ಯೋಧರನ್ನು ಹತ್ಯೆ ಮಾಡಿರುವುದಕ್ಕೆ ಪಾಕಿಸ್ತಾನವೇ ನೇರಹೊಣೆಯಾಗಿದೆ ಎಂದು ತಿಳಿಸಿದ್ದಾರೆ.

ಇದೇ ರೀತಿಯಲ್ಲಿಯೇ ಮತ್ತೊಬ್ಬ ಸೇನಾ ತಜ್ಞ ಮೇಜರ್ ಜನರಲ್ ಎಸ್.ಆರ್. ಸಿನ್ಹೋ ಅವರೂ ಕೂಡ ಪ್ರತಿಕ್ರಿಯೆ ನೀಡಿದ್ದು, ಸೀಮಿತ ದಾಳಿ ಬಳಿಕ ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡುವುದನ್ನು ಮತ್ತಷ್ಟು ಹೆಚ್ಚಿಸಿದೆ. ಪಾಕಿಸ್ತಾನ ಸೇನೆಯನ್ನು ಗುರಿಯಾಗಿಸಿಟ್ಟುಕೊಂಡು ದಾಳಿ ಮಾಡುತ್ತಿದೆ. ಪಾಕಿಸ್ತಾನ ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿದೆ. ಅಲ್ಲದೆ, ತಮ್ಮನ್ನು ಕೂಡ ಸಾಯಿಸುತ್ತಾರೆಂಬುದು ತಿಳಿದಿದ್ದರೂ ಉಗ್ರರಿಗೆ ತರಬೇತಿಯನ್ನು ನೀಡುತ್ತಿದ್ದಾರೆ. ಕಾಶ್ಮೀರ-ಪಠಾಣ್ ಕೋಟ್ ನಲ್ಲಿ ಅತೀವ್ರ ಚಳಿಯಿದ್ದು, ಮಂಜು ಬೀಳುತ್ತಿದೆ. ಹೀಗಾಗಿ ಉಗ್ರರು ತಮ್ಮ ಚಟುವಟಿಕೆಗಳನ್ನು ಕಾಶ್ಮೀರದಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com