
ಶಬರಿಮಲೆ: ಶಬರಿಮಲೆ ಸ್ವಾಮಿ ಅಯ್ಯಪ್ಪ ಸ್ವಾಮಿ ದೇವಾಲಯವನ್ನು ರಾಷ್ಟ್ರೀಯ ಯಾತ್ರಾ ಸ್ಥಳವನ್ನಾಗಿ ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಕೇರಳ ರಾಜ್ಯಪಾಲ ಪಿ ಸಥಾಶಿವಂ ಹೇಳಿದ್ದಾರೆ.
ಪಂಪಾ ಸಂಗಮಮ್ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಜಗತ್ತಿನಲ್ಲಿಯೇ, ಶಬರಿಮಲೆ ದೇವಾಲಯ ಅದ್ವತೀಯವಾಗಿದ್ದು, ಎಲ್ಲಾ ಭಾಷೆ, ಜಾತಿ, ಧರ್ಮದವರನ್ನು ಆಕರ್ಷಿಸುತ್ತಿದೆ. ಶಬರಿಮಲೆಯಲ್ಲಿ ಪರಿಸರ ಸಂಬಂಧಿ ಮತ್ತು ಇಕೋ ಫ್ರೆಂಡ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಧ್ಯಕ್ಷ ನ್ಯಾ.ಸ್ವತಂತ್ರ್ಯ ಕುಮಾರ್ ಅವರನ್ನು ಶಬರಿಮಲೆಗೆ ಆಹ್ವಾನಿಸಿ ಸ್ಥಳ ಪರಿಶೀಲನೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ಶಬರಿಮಲೆ ದೇವಾಲಯವನ್ನು ಇತರ ಯಾತ್ರಾ ಸ್ಥಳಗಳ ಜೊತೆ ಹೋಲಿಕೆ ಮಾಡಬಾರದು ಎಂದು ಅವರು ಹೇಳಿದ್ದಾರೆ.
Advertisement