ನಿಂತಿದ್ದ ಬಸ್ ಗೆ ಮತ್ತೊಂದು ಬಸ್ ಡಿಕ್ಕಿ; ಕನಿಷ್ಟ 6 ಸಾವು, 30 ಮಂದಿಗೆ ಗಾಯ

ಉತ್ತರ ಪ್ರದೇಶದ ಬರೇಲಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬಸ್ ಅಪಘಾತ
ಬಸ್ ಅಪಘಾತ
Updated on: 

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಬರೇಲಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ದುರಂತ ಸಂಭವಿಸಿದ್ದು, ನಿಂತಿದ್ದ ಬಸ್ ಗ್ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 6 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂತೆಯೇ 30 ಮಂದಿ  ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪೊಲೀಸರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com