ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ: ವರದಿ ಕೇಳಿದ ಗೃಹ ಸಚಿವ

ದೇಶದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಪ್ರಕರಣ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ಸೂಚನೆ...
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್

ನವದೆಹಲಿ: ದೇಶದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಪ್ರಕರಣ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.

ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ನೀಡುತ್ತಿರುವ ಕಳಪೆ ಗುಣಮಟ್ಟದ ಆಹಾರ ಕುರಿತಂತೆ ನಿನ್ನೆಯಷ್ಟೇ ಬಿಎಸ್ ಎಫ್ ಯೋಧರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಾಕಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯನ್ನು ಹೇಳಿಕೊಂಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಅಲ್ಲದೆ, ಅಧಿಕಾರಿಗಳ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

ಈ ಹಿನ್ನಲೆಯಲ್ಲಿ ಟ್ಟಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಜನಾಥ ಸಿಂಗ್ ಅವರು, ಬಿಎಸ್ಎಫ್ ಯೋಧರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಯೋಧ ಹಾಕಿರುವ ವಿಡಿಯೋವನ್ನು ನಾನು ನೋಡಿದೆ. ಪ್ರಕರಣ ಸಂಬಂಧ ವರದಿ ಸಲ್ಲಿಸುವಂತೆ ಈಗಾಗಲೇ ಗೃಹ ಸಚಿವಾಲಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಶೀಘ್ರದಲ್ಲೇ ತಪ್ಪಿತಸ್ಥ ರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com