ಶಿವಸೇನೆ
ದೇಶ
ಗೋವಾ: ಎಂಜಿಪಿ-ಜಿಎಸ್ಎಂ-ಶಿವಸೇನೆ ಮೈತ್ರಿ, ಬಿಜೆಪಿಗೆ ಹಿನ್ನಡೆ
ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದ್ದು, ಮಿತ್ರಪಕ್ಷ ಶಿವಸೇನೆ ಗೋವಾ ಸುರಕ್ಷಾ ಮಂಚ್ ಹಾಗೂ ಬಿಜೆಪಿಯ ಮಾಜಿ ಮಿತ್ರ ಪಕ್ಷ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ)ಯೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಮುಂಬೈ: ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದ್ದು, ಮಿತ್ರಪಕ್ಷ ಶಿವಸೇನೆ ಗೋವಾ ಸುರಕ್ಷಾ ಮಂಚ್ ಹಾಗೂ ಬಿಜೆಪಿಯ ಮಾಜಿ ಮಿತ್ರ ಪಕ್ಷ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ)ಯೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಜ.10 ರಂದು ಶಿವಸೇನೆ-ಎಂಜಿಪಿ-ಜಿಎಸ್ಎಂ ಮೈತ್ರಿ ಅಧಿಕೃತವಾಗಿ ಘೋಷಣೆಯಾಗಿದ್ದು, ಎಂಜಿಪಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದ ಬೆಳವಣಿಗೆ ಬೆನ್ನಲ್ಲೇ ಹೊಸ ಮೈತ್ರಿ ಘೋಷಣೆಯಾಗಿದೆ.
ಗೋವಾ ಬಿಜೆಪಿ ಸುದಿನ್ ಧಾವಳೀಕರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಹಿನ್ನೆಲೆಯಲ್ಲಿ ಎಂಜಿಪಿ ಜ.5 ರಂದು ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿತ್ತು. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ವಿಧಾನಸಭಾ ಚುನಾವಣೆಗಳೊಂದಿಗೆ ಗೋವಾ ವಿಧಾನಸಭೆಗೂ ಚುನಾವಣೆ ನಡೆಯಲಿದ್ದು, ಎಂಜಿಪಿ-ಜಿಎಸ್ಎಂ-ಶಿವಸೇನೆ ಮೈತ್ರಿಯಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ