ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮುಂದುವರೆಯಲಿದ್ದಾರೆ: ವ್ಯಾಪಕ ಟೀಕೆ ನಂತರ ಆಪ್ ಸ್ಪಷ್ಟನೆ

ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪಷ್ಟನೆ ನೀಡಿದ್ದು, ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on: 
ನವದೆಹಲಿ: ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಹುದ್ದೆ ಬಿಟ್ಟು ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆಯೇ, ಆಮ್ ಆದ್ಮಿ ಪಕ್ಷವನ್ನು ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸಿದ್ದವು. ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪಷ್ಟನೆ ನೀಡಿದ್ದು, ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದಿದೆ. 
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೂ ಸಹ ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಆಗಿಯೇ ಮುಂದುವರೆಯಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಜ.11 ರಂದು ಸ್ಪಷ್ಟಪಡಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲೇ ಪಂಜಾಬ್ ಚುನಾವಣೆಯನ್ನು ಎದುರಿಸುತ್ತೇವೆ ಆದರೆ ಅವರು ಆಮ್ ಆದ್ಮಿ ಪಕ್ಷ ಗೆದ್ದರೆ ಪಂಜಾಬ್ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಪಕ್ಷದ ಮುಖಂಡ ಆತಿಶಿ ಮರ್ಲೆನಾ ತಿಳಿಸಿದ್ದಾರೆ. 
ಪಂಜಾಬ್ ಚುನಾವಣೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಕುರಿತಾಗಿ ಮನೀಶ್ ಸಿಸೋಡಿಯಾ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಆಪ್ ಸ್ಪಷ್ಟನೆ ನೀಡಿದೆ. ಜ.10 ರಂದು ಪಂಜಾಬ್ ಚುನಾವಣೆ ಬಗ್ಗೆ ಹೇಳಿಕೆ ನೀಡಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ,  ಅರವಿಂದ್ ಕೇಜ್ರಿವಾಲ್ ಅವರೇ ಪಂಜಾಬ್ ಮುಂದಿನ ಮುಖ್ಯಮಂತ್ರಿ ಎಂದು ಭಾವಿಸಿ ಎಎಪಿಗೆ ಮತ ಹಾಕಿ ಎಂದು ಪಂಜಾಬ್ ಜನತೆಗೆ ಮನವಿ ಮಾಡಿದ್ದರು. ಮನೀಷ್ ಸಿಸೋಡಿಯಾ ಅವರ ಈ ಹೇಳಿಕೆಯಿಂದ ಆಪ್ ಪಂಜಾಬ್ ಚುನಾವಣೆಯಲ್ಲಿ ಬಹುಮತ ಪಡೆದರೆ ಕೇಜ್ರಿವಾಲ್ ಪಂಜಾಬ್ ನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com