ವಿವಾದಾತ್ಕಕ ಹೇಳಿಕೆ: ಚುನಾವಣಾ ಆಯೋಗಕ್ಕೆ ಸ್ಪಷ್ಟನೆ ನೀಡಿದ ಸಾಕ್ಷಿ ಮಹಾರಾಜ್

ಸಮುದಾಯವನ್ನು ಉದ್ದೇಶಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿಮಹಾರಾಜ್ ಅವರು ತಮ್ಮ ಹೇಳಿಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಬುಧವಾರ ಸ್ಪಷ್ಟನೆ ನೀಡಿದ್ದಾರೆ...
ಬಿಜೆಪಿ ಸಂಸದ ಸಾಕ್ಷಿಮಹಾರಾಜ್
ಬಿಜೆಪಿ ಸಂಸದ ಸಾಕ್ಷಿಮಹಾರಾಜ್

ನವದೆಹಲಿ: ಸಮುದಾಯವನ್ನು ಉದ್ದೇಶಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು ತಮ್ಮ ಹೇಳಿಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಬುಧವಾರ ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ಸಾಕ್ಷಿ ಮಹಾರಾಜ್ ಅವರು, 4 ಪತ್ನಿಯರು, 40 ಮಕ್ಕಳು ಹಾಗೂ 3 ವಿಚ್ಛೇದನ ಎಂಬ ಪರಿಕಲ್ಪನೆಯನ್ನು ಅನುಸರಿಸುತ್ತಿರುವವರೇ ದೇಶದಲ್ಲಿ ಎದುರಾಗಿರುವ ಜನಸಂಖ್ಯಾ ಸ್ಫೋಟಕ್ಕೆ ಕಾರಣ ಎಂದು ಹೇಳಿದ್ದರು. ಹೇಳಿಕೆ ಸಂಬಂಧ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗ ಸಾಕ್ಷಿ ಮಹಾರಾಜ್ ಅವರು ತಮ್ಮ ಹೇಳಿಕೆ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದು, ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಬೇಕೆಂದು ನೋಟಿಸ್ ಜಾರಿ ಮಾಡಿತ್ತು.

ಇದರಂತೆ ಇಂದು ನೋಟಿಸ್ ಗೆ ಪ್ರತಿಕ್ರಿಯೆ ನೀಡಿರುವ ಸಾಕ್ಷಿ ಮಹಾರಾಜ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ತಪ್ಪಾಗಿ ಯಾವುದೇ ಹೇಳಿಕೆಯನ್ನು ನೀಡಿಲ್ಲ. ನಾನು ಯಾವುದೇ ಸಮುದಾಯ ಹೆಸರನ್ನು ಉದ್ದೇಶಿಸಿ ಮಾತನಾಡಿಲ್ಲ. ಜನಸಂಖ್ಯೆಯನ್ನು ನಿಯಂತ್ರಿಸಬೇಕು, ಮಹಿಳೆಯರೇನು ಮಕ್ಕಳನ್ನು ಹೆರುವ ಯಂತ್ರಗಳಲ್ಲ. ಎಂದು ಹೇಳಿದ್ದೆ. ಅದೊಂದು ಸಂತರ ಕಾರ್ಯಕ್ರಮವಾಗಿದ್ದು, ಯಾವುದೇ ರಾಜಕೀಯ ರ್ಯಾಲಿಯಾಗಿರಲಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com