ಜಲ್ಲಿಕಟ್ಟು ವಿವಾದ: ನಾಳೆ ಪ್ರಧಾನಿ ಮೋದಿ ಭೇಟಿ ಮಾಡಲಿರುವ ಎಐಎಡಿಎಕೆ

ಪೊಂಗಲ್ ದಿನದಂದು ಸಾಂಪ್ರದಾಯಿಕ ಕ್ರೀಡೆಯಾಗಿರುವ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡುವಂತೆ ಕೋಟಿ ಎಐಎಡಿಎಕೆ ಪಕ್ಷದ ಸಂಸದರು ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆಂದು...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ಪೊಂಗಲ್ ದಿನದಂದು ಸಾಂಪ್ರದಾಯಿಕ ಕ್ರೀಡೆಯಾಗಿರುವ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡುವಂತೆ ಕೋಟಿ ಎಐಎಡಿಎಕೆ ಪಕ್ಷದ ಸಂಸದರು ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆಂದು ಬುಧವಾರ ತಿಳಿದುಬಂದಿದೆ.

ನಿಷೇಧಿತ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಯೋಜಿಸಲು ಅವಕಾಶ ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಪರಿಶೀಲನೆ ನಡೆಸುವಂತೆ ತಮಿಳುನಾಡು ಸರ್ಕಾರ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿತ್ತು.

ಜಲ್ಲಿಕಟ್ಟು ಆಚರಣೆಗೆ ಎದುರಾಗಿರುವ ಕಾನೂನು ಅಡಚಣೆಗಳನ್ನು ನಿವಾರಿಸಲು ಸುಗ್ರೀವಾಜ್ಞೆ ಹೊರಡಿಸುವ ಆಯ್ಕೆಯ್ನು ಪರಿಗಣಿಸಬೇಕು ಎಂದು ತಮಿಳುನಾಡು ರಾಜ್ಯ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಇದೀಗ ಎಐಎಡಿಎಂಕೆ ಪಕ್ಷದ ಸಂಸದರು ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ನಿರ್ಧಾರಿಸಿದ್ದು, ಭೇಟಿ ವೇಳೆ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.

ಜಲಿಕಟ್ಟು ಆಚರಣೆಗೆ ಗೂಳಿಗಳನ್ನು ಬಳಸುವುದಕ್ಕೆ 2014ರಲ್ಲಿ ಸುಪ್ರೀಂಕೋರ್ಟ್ ನಿಷೇಧ ಹೇರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com