ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಜ.11 ರಿಂದ ಕಾಂಗ್ರೆಸ್ ರಾಷ್ಟ್ರೀಯ ಸಮಾವೇಶ

ನೋಟು ನಿಷೇಧದ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಉಂಟಾದ ಸಮಸ್ಯೆಗಳಿಗೆ ಧ್ವನಿಯಾಗುವುದಕ್ಕಾಗಿ ಕಾಂಗ್ರೆಸ್ ನವದೆಹಲಿಯ ತಾಲ್ಕಟೋರಾ ಸ್ಟೇಡಿಯಂ ನಲ್ಲಿ ಜನವೇದನೆ( ಜನ್ ವೇದ್ನಾ) ಸಮಾವೇಶ ಹಮ್ಮಿಕೊಂಡಿದೆ
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 
ನವದೆಹಲಿ: ನೋಟು ನಿಷೇಧದ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಉಂಟಾದ ಸಮಸ್ಯೆಗಳಿಗೆ ಧ್ವನಿಯಾಗುವುದಕ್ಕಾಗಿ ಕಾಂಗ್ರೆಸ್ ನವದೆಹಲಿಯ ತಾಲ್ಕಟೋರಾ ಸ್ಟೇಡಿಯಂ ನಲ್ಲಿ ಜನವೇದನೆ( ಜನ್ ವೇದ್ನಾ) ಸಮಾವೇಶ ಹಮ್ಮಿಕೊಂಡಿದ್ದು, ರಾಹುಲ್ ಗಾಂಧಿ ಅಧ್ಯಕ್ಷತೆ ವಹಿಸಲಿದ್ದಾರೆ. 
ಬೆಳಿಗ್ಗೆ 10 ರಿಂದ 4 ರ ವರೆಗೆ ತಾಲ್ಕಟೋರಾ ಶ್ಟೇಡಿಯಂ ನಲ್ಲಿ ಸಮಾವೇಶನ ನಡೆಯಲಿದ್ದು, ನೋಟು ನಿಷೇಧದ ವಿರುದ್ಧದ ಪ್ರತಿಭಟನೆಯನ್ನು ಮುನ್ನಡೆಸಿದ್ದ ರಾಹುಲ್ ಗಾಂಧಿಯೇ ಅಧಿವೇಶನಕ್ಕೂ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ನ ವಕ್ತಾರ ಶಕ್ತಿಸಿನ್ಹಾ ಗೋಹಿಲ್ ತಿಳಿಸಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ರಾಹುಲ್ ಗಾಂಧಿ ಪಕ್ಷದ ಸ್ಥಪನಾ ದಿನದಂದು ನಡೆದ ಕಾರ್ಯಕ್ರಮಕ್ಕೂ ಅಧ್ಯಕ್ಷತೆ ವಹಿಸಿದ್ದರು. 
ರಾಹುಲ್ ಗಾಂಧಿ ಅವರು ಶೀಘ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳಿದ್ದು ಜ.11 ರಂದು ನಡೆಯುತ್ತಿರುವ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸುತ್ತಿರುವುದು ಇದಕ್ಕೆ ಪೂರಕವಾಗಿದೆ. 
" ರಾಹುಲ್ ಗಾಂಧಿ ಅತ್ಯುತ್ತಮ ನಾಯಕರಾಗಿದ್ದು, ಎಂದಿಗೂ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ನೋಟು ನಿಷೇಧದಿಂದ ಜನಸಾಮಾನ್ಯರಿಗೆ ಉಂಟಾದ ಸಂಕಷ್ಟಗಳನ್ನು ಚರ್ಚಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಕ್ತಿಸಿನ್ಹಾ ಗೋಹಿಲ್ ತಿಳಿಸಿದ್ದಾರೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com