

ಗಾಂಧಿನಗರ: ದೇಶಕ್ಕಾಗಿ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಲು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಗುರುವಾರ ನಿರಾಕರಿಸಿದ್ದಾರೆ.
ಗಡಿ ಭದ್ರತಾ ಪಡೆ ಗೃಹ ಸಚಿವಾಲಯದ ಅಡಿಯಲ್ಲಿ ಬರಲಿದ್ದು, ಪ್ರಕರಣ ಸಂಬಂಧ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಪರಿಕ್ಕರ್ ಅವರು ಹೇಳಿದ್ದಾರೆ.
ಕಳೆದ ಎರಡು ವರ್ಷಗಳಿಂದಲೂ ಯೋಧರ ಸಮಸ್ಯೆಗಳ ಕುರಿತಂತೆ ರಕ್ಷಣಾ ಸಚಿವಾಲಯ ಪರಿಶೀಲನೆ ನಡೆಸುತ್ತಿದ್ದು, ಆಹಾರ ಗುಣಮಟ್ಟವನ್ನು ಸರಿಪಡಿಸಲು ಯತ್ನ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಸೇನಾ ಅಧಿಕಾರಿಗಳ ವಿರುದ್ದ ಆರೋಪ ವ್ಯಕ್ತಪಡಿಸಿದ್ದರು. ಸೇನೆಯಲ್ಲಿ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದು, ಯೋಧರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆಂದು ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿತ್ತು.