ಪೆಟ್ರೋಲ್ ಬಂಕ್‌ಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಬಳಕೆ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಗೋವಾದ ಪೆಟ್ರೋಲ್ ಬಂಕ್ ಗಳಲ್ಲಿ ಹಾಕಿರುವುದಕ್ಕೆ ಚುನಾವಣಾ ಆಯೋಗ ಗರಂ ಆಗಿದೆ...
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಗೋವಾದ ಪೆಟ್ರೋಲ್ ಬಂಕ್ ಗಳಲ್ಲಿ ಹಾಕಿರುವುದಕ್ಕೆ ಚುನಾವಣಾ ಆಯೋಗ ಗರಂ ಆಗಿದೆ. 
ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದ್ದು ಪೆಟ್ರೋಲ್ ಬಂಕ್ ಗಳಲ್ಲಿ ಮೋದಿ ಭಾವಚಿತ್ರಗಳಿದ್ದು ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಚುನಾವಣೆ ಸಮಯದಲ್ಲಿನ ಸೂಚನೆಗಳನ್ನು ಪಾಲಿಸುವಂತೆ ಸಂಪುಟ ಕಾರ್ಯದರ್ಶಿಗಳಿಗೆ ಚುನಾವಣಾ ಆಯೋಗ ತಾಕೀತು ಮಾಡಿದೆ. 
ಚುನಾವಣೆ ಎದುರಿಸಲಿರುವ ಗೋವಾದ ಪೆಟ್ರೋಲ್ ಬಂಕ್ ಗಳಲ್ಲಿ ಮೋದಿ ಭಾವಚಿತ್ರಗಳು ಇರುವ ಬಗ್ಗೆ ದೂರುಗಳು ಬಂದಿವೆ ಎಂದು ಚುನಾವಣಾ ಆಯೋಗ ಸಂಪುಟ ಕಾರ್ಯದರ್ಶಿ ಪಿಕೆ ಸಿನ್ಹಾ ಅವರಿಗೆ ಪತ್ರ ಬರೆದಿದೆ. ಇದರ ಜತೆಗೆ ಉತ್ತರಾಖಂಡ್ ನಲ್ಲೂ ಸಹ ಅನಿಲ ಕಂಪನಿಗಳು ಗ್ರಾಹಕರಿಗೆ ಮೋದಿ ಚಿತ್ರಗಳಿರುವ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ದೂರಿದೆ. 
ಈ ವಿಚಾರವನ್ನು ಸಂಬಂಧಪಟ್ಟರ ಗಮನಕ್ಕೆ ತಂದು ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿ ಎಂದು ಸಿನ್ಹಾ ಅವರಿಗೆ ಚುನಾವಣಾ ಆಯೋಗ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com