ಜಮ್ಮು-ಕಾಶ್ಮೀರ: ಅಂತರಾಷ್ಟ್ರೀಯ ಗಡಿ ನುಸುಳುತ್ತಿದ್ದ ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಭಾರತದ ಒಳನುಸುಳಲು ಯತ್ನ ನಡೆಸುತ್ತಿದ್ದ ಉಗ್ರರ ಗುಂಪನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಭಾರತದ ಒಳನುಸುಳಲು ಯತ್ನ ನಡೆಸುತ್ತಿದ್ದ ಉಗ್ರರ ಗುಂಪನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ.

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಪಾಕಿಸ್ತಾನದ ಗಡಿ ಭಾಗದಿಂದ ಬಂದಿರುವ 4-6 ಉಗ್ರರ ಗುಂಪು ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಭಾರತ ಒಳಗೆ ನುಸುಳಲು ಯತ್ನ ನನಡೆಸಿದ್ದರು ಎಂದು ಬಿಎಸ್ಎಫ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಉಗ್ರರು ಒಳನುಸುಳುವುದನ್ನು ಕಂಡ ಭಾರತೀಯ ಸೇನೆ ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸಿತ್ತು. ಸೇನೆಯ ಪರಿಣಾಮಕಾರಿ ದಾಳಿಯಿಂದಾಗಿ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದರು. ಓರ್ವ ಶಂಕಿತ ಉಗ್ರರ ಮೃತ ದೇಹ ಸ್ಥಳದಲ್ಲಿರುವುದಾಗಿ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com