'ಕೈ' ಹಿಡಿದ ನವಜೋತ್ ಸಿಂಗ್ ಸಿಧು

ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕೊನೆಗೂ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ನವಜೋತ್ ಸಿಂಗ್ ಸಿಧು
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ನವಜೋತ್ ಸಿಂಗ್ ಸಿಧು
ನವದೆಹಲಿ: ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕೊನೆಗೂ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. 
ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹಲವು ದಿನಗಳಿಂದ ಚಾಲ್ತಿಯಲ್ಲಿತ್ತು. ಈಕ್ಗ ಎಲ್ಲಾ ಊಹಾಪೋಹಗಳಿಗೆ ತೆರೆಬಿದ್ದಿದ್ದು ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. 
ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದಕ್ಕೂ ಕೆಲವೇ ಗಂಟೆಗಳ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪಂಜಾಬ್ ಕಾಂಗ್ರೆಸ್ ಮುಖಂಡ ಅಮರಿಂದರ್ ಸಿಂಗ್, ಸಿದು ಈಗಾಗಲೇ ಕಾಂಗ್ರೆಸ್ ನಲ್ಲಿದ್ದಾರೆ. ಅವರೇ ಅಮೃತಸರದ ಕಾಂಗ್ರೆಸ್ ಅಭ್ಯರ್ಥಿ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಸಿಧು ಪತ್ನಿ ನವಜೋತ್ ಕೌರ್ ಈಗಾಗಲೇ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದ್ದರು. ಬಿಜೆಪಿಯಲ್ಲಿದ್ದ  ನವಜೋತ್ ಸಿಂಗ್ ಸಿಧು 2016 ರಲ್ಲಿ ತಮ್ಮನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಪಕ್ಷ ತೊರೆದಿದ್ದರು. ಇನ್ನು ಪಂಜಾಬ್ ಚುನಾವಣೆಗೆ ಫೆಬ್ರವರಿ 4 ರಂದು ಕಾಂಗ್ರೆಸ್ ಮತ್ತೊಂದು ಸುತ್ತಿನ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com