
ಅಮೃತಸರ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಡ್ರಗ್ಸ್ ಸೇವಿಸಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಆರೋಪಿಸಿದ್ದಾರೆ.
ಪಂಜಾಬ್ ನಲ್ಲಿ ಶೇ. 70 ರಷ್ಟು ಯುವಕರು ಮಾದಕ ವ್ಯಸನಿಗಳಾಗಿದ್ದಾರೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಕೌರ್, ಡ್ರಗ್ಸ್ ಸೇವಿಸಿ ರಾಹುಲ್ ಗಾಂಧಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೇಶದ ಅತಿ ಹಿರಿಯ ಪಕ್ಷವಾದ ಕಾಂಗ್ರೆಸ್ ಬಾಯಿಗೆ ಬಂದಂತೆ ಹೇಳಿಕೆ ನೀಡುವ ಮೂಲಕ ಪಂಜಾಬ್ ಯುವಕರ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ದೂರಿದ್ದಾರೆ.
ವಿಧಾನಸಭೆ ಚುನಾವಣೆ ನಡೆಯುತ್ತಿರುವ ಪಂಜಾಬ್ ನಲ್ಲಿ ಶಿರೋಮಣಿ ಅಕಾಲಿ ದಳ ಡ್ರಗ್ ಮಾಫಿಯಾವನ್ನು ನಿಬಾಯಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪಂಜಾಬ್ ನಲ್ಲಿರುವ ಪ್ರಕಾಶ್ ಸಿಂಗ್ ಬಾದಲ್ ಸರ್ಕಾರ ಮಾದಕ ವಸ್ತು ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತಾಳಿದೆ ಎಂದು ರಾಹುಲ್ ದೂರಿದ್ದರು. ಹರ್ಸಿಮ್ರತ್ ಕೌರ್ ಬಾದಲ್ ಪಂಜಾಬ್ ಉಪ ಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಪತ್ನಿ.
Advertisement