ಕಾಂಗ್ರೆಸ್ ಸೇರ್ಪಡೆ 'ಘರ್ ವಾಪಸಿ': ನವಜೋತ್ ಸಿಂಗ್ ಸಿಧು

ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನನ್ನ ತಂದೆ ಕಾಂಗ್ರೆಸ್ಸಿಗರಾಗಿದ್ದರು, " ನಾನು ಮೂಲತಃ ಕಾಂಗ್ರೆಸ್ಸಿಗ, ಈಗ ಘರ್ ವಾಪಸಿಯಾಗಿದೆಯಷ್ಟೇ ಎಂದು ಹೇಳಿದ್ದಾರೆ.
ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು
ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಸಂಸದ ನವಜೋತ್ ಸಿಂಗ್ ಸಿಧು, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನನ್ನ ತಂದೆ ಕಾಂಗ್ರೆಸ್ಸಿಗರಾಗಿದ್ದರು, " ನಾನು ಮೂಲತಃ ಕಾಂಗ್ರೆಸ್ಸಿಗ, ಈಗ ಘರ್ ವಾಪಸಿಯಾಗಿದೆಯಷ್ಟೇ ಎಂದು ಹೇಳಿದ್ದಾರೆ. 
ಈ ಬಾರಿಯ ವಿಧಾನಸಭಾ ಚುನಾವಣೆ ಪಂಜಾಬ್ ನ ಅಸ್ತಿತ್ವದ, ಸ್ವಾಭಿಮಾನದ ಪ್ರಶ್ನೆಯಾಗಿದೆ. ಒಂದು ಕಾಲದಲ್ಲಿ ಹಸಿರು ಕ್ರಾಂತಿಗೆ ಹೆಸರಾಗಿದ್ದ ಪಂಜಾಬ್ ಈಗ ಚಿಟ್ಟಾ( ಡ್ರಗ್ ನ ಒಂದು ಮಾದರಿ) ಗೆ ಹೆಸರಾಗಿದೆ. ಅಕಾಲಿ ದಳವೂ ಪ್ರಾರಂಭದಲ್ಲಿ ಒಳ್ಳೆಯ ಉದ್ದೇಶಗಳನ್ನು ಹೊಂದಿತ್ತಾದರೂ ಈಗ ಅದು ಖಾಸಗಿ ಸ್ವತ್ತಾಗಿ ಪರಿವರ್ತನೆಯಾಗಿದೆ ಎಂದು ನವಜೋತ್ ಸಿಂಗ್ ಸಿಧು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿಧು ಅಮೃತ್ ಸರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com