ದೇಶ

ಯೋಧರಿಗೆ ಕಳಪೆ ಆಹಾರ; ಕೇಂದ್ರದ ವರದಿ ಕೇಳಿದ ದೆಹಲಿ ಹೈಕೋರ್ಟ್

ಯೋಧರಿಗೆ ಕಳಪೆ ಆಹಾರ; ಕೇಂದ್ರದ ವರದಿ ಕೇಳಿದ ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್ ಮತ್ತು ಭಾರತೀಯ ಯೋಧರು (ಸಂಗ್ರಹ ಚಿತ್ರ)
Published On :

ನವದೆಹಲಿ: ಭಾರತೀಯ ಯೋಧರಿಗೆ ನೀಡಲಾಗುತ್ತಿರುವ ಕಳಪೆ ಗುಣಮಟ್ಟದ ಆಹಾರ ಕುರಿತಂತೆ ದೇಶವ್ಯಾಪಿ ವ್ಯಾಪಕ ಚರ್ಚೆಯಾಗುತ್ತಿರವ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಕೂಡ ಈ ಬಗ್ಗೆ ವರದಿ ನೀಡುವಂತೆ ಕೇಂದ್ರ  ಸರ್ಕಾರವನ್ನು ಕೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯೋಧರು ಅಪ್ಲೋಡ್ ಮಾಡಿದ್ದ ವಿಡಿಯೋವನ್ನೇ ಹಿನ್ನಲೆಯಾಗಿಟ್ಟುಕೊಂಡು ಕೇಂದ್ರ ಸರ್ಕಾರೀ ನಿವೃತ್ತ ನೌಕರರಾದ ಪೂರನ್ ಚಂದ್ ಆರ್ಯ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ  ಮುಖ್ಯ ನ್ಯಾಯಮೂರ್ತಿ ಜಿ ರೋಹಿಣಿ, ನ್ಯಾ.ಸಂಗೀತಾ ದಿಂಗ್ರಾ ಸೆಹ್ಗಲ್ ನೇತತ್ವದ ದ್ವಿ ಸದಸ್ಯ ಪೀಠ ಈ ಸಂಬಂಧ ಕೇಂದ್ರ ಸರ್ಕಾರದಿಂದ ಮಾಹಿತಿ ಕೇಳಿದೆ. ಅಂತೆಯೇ ಬಿಎಸ್ ಎಫ್, ಸಿಆರ್ ಪಿಎಫ್, ಸಿಐಎಸ್ ಎಫ್, ಐಟಿಪಿಬಿ  ಮತ್ತು ಸಶಸ್ತ್ರ ಸೀಮಾ ಬಲ ಸೇನಾ ವಿಭಾಗಗಳಿಗೆ ಈ ಸಂಬಂಧ ನೋಟಿಸ್ ಕೂಡ ಜಾರಿ ಮಾಡಿದೆ.

ಯೋಧರಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಸರಿಯಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ಉತ್ತರ ನೀಡುವಂತೆ ಹೈಕೋರ್ಟ್ ದ್ವಿಸದಸ್ಯ ಪೀಠ ಕೇಳಿದೆ. ಇನ್ನು ಸರ್ಕಾರಿ ಪರ  ವಕೀಲರಾದ ಗೌರಂಗ್ ಕಾಂತ್ ಅವರು ತಮ್ಮ ವಾದ ಮಂಡಿಸುತ್ತಾ, ಯೋಧರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿರುವಂತೆ ಗಡಿಯಲ್ಲಿ ಕಳಪೆ ಆಹಾರವನ್ನು ಪೂರೈಕೆ ಮಾಡಲಾಗುತ್ತಿಲ್ಲ. ಉತ್ತಮ ಗುಣಮಟ್ಟದ  ಆಹಾರವನ್ನೇ ನೀಡಲಾಗುತ್ತಿದೆ ಎಂದು ತಮ್ಮ ವಾದ ಮಂಡಿಸಿದರು.

ಪರ-ವಿರೋಧ ವಾದಗಳನ್ನು ಆಲಿಸಿದ ನ್ಯಾಯಪೀಠ ಈ ಸಂಬಂಧ ಮಾಹಿತಿ ನೀಡುವಂತೆ ಕೇಂದ್ರ ಗೃಹ ಇಲಾಖೆಗೆ ಸೂಚನೆ ನೀಡಿದೆ.  ಈ ಹಿಂದೆ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಯೋಧರಿಗೆ  ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಸರಿಯಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ದೂರಿದ್ದರು. ಇದಾದ ಬಳಿಕ ಕೆಲವೇ ದಿನಗಳಲ್ಲಿ ಗಡಿಯಲ್ಲಿ ಸೇನಾಪಡೆ ಅಧಿಕಾರಿಗಳು ಕಡಿಮೆ ದರಕ್ಕೆ ಪಡಿತರಗಳನ್ನು ಮಾರಿಕೊಳ್ಳುತ್ತಿದ್ದಾರೆ  ಎಂಬ ಸುದ್ದಿಗಳೂ ಕೇಳಿಬಂದಿತ್ತು. ಈ ವಿಚಾರ ದೇಶವ್ಯಾಪಿ ಭಾರಿ ಚರ್ಚೆಗೆ ಕಾರಣವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.