ಲೋಕಾಯುಕ್ತಕ್ಕೆ ನ್ಯಾ.ವಿಶ್ವನಾಥ ಶೆಟ್ಟಿ ನೇಮಕ ಶಿಫಾರಸು ತಿರಸ್ಕಾರ: ಸರ್ಕಾರಕ್ಕೆ ಮತ್ತೆ ಮುಖಭಂಗ

ಲೋಕಾಯುಕ್ತಕ್ಕೆ ನ್ಯಾ.ವಿಶ್ವನಾಥ ಶೆಟ್ಟಿ ನೇಮಕ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಮುಖಭಂಗವಾಗಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಲೋಕಾಯುಕ್ತಕ್ಕೆ ನ್ಯಾ.ವಿಶ್ವನಾಥ ಶೆಟ್ಟಿ ನೇಮಕ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಮುಖಭಂಗವಾಗಿದೆ. 
ನ್ಯಾ.ವಿಶ್ವನಾಥ ಶೆಟ್ಟಿ ಅವರ ಹಿನ್ನೆಲೆಯನ್ನು ಸರಿಯಾಗಿ ಪರಿಶೀಲನೆ ಮಾಡದೇ ನಿರ್ಧಾರ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಮಿತಿಯ ಕಾರ್ಯವೈಖರಿಗೆ ರಾಜ್ಯಪಾಲರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಳಂಕ ಹೊಂದಿರದ ವ್ಯಕ್ತಿಯನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. 
ಸುಳ್ಳು ದಾಖಲೆ ನೀಡಿ ನ್ಯಾಯಾಂಗ ಬಡಾವಣೆಯಲ್ಲಿ ಅಕ್ರಮವಾಗಿ ನಿವೇಶನ ಪಡೆದಿರುವ ಆರೋಪ ನ್ಯಾ.ವಿಶ್ವನಾಥ ಶೆಟ್ಟಿ ಅವರ ವಿರುದ್ಧ ಕೇಳಿಬಂದಿದ್ದು, ಈ ಬಗ್ಗೆ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ್ ಗಂಭೀರ ಆರೋಪ ಮಾಡಿ, ರಾಜ್ಯ ಸರ್ಕಾರ ಕಳಿಸಿಕೊಟ್ಟಿರುವ ಶಿಫಾರಸನ್ನು ತಿರಸ್ಕರಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದ್ದರು. 
ಅಕ್ರಮವಾಗಿ ನಿವೇಶನ ಪಡೆದಿರುವುದು ಮಾತ್ರವಲ್ಲದೇ, ಗಾಲಿ ಜನಾರ್ದನ ರೆಡ್ಡಿ ವಿರುದ್ಧದ ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿರುವುದನ್ನು ತಿರಸ್ಕರಿಸಬೇಕೆಂದು ಎಸ್ ಆರ್ ಹಿರೇಮಠ್ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ನ್ಯಾ. ವಿಶ್ವನಾಥ ಶೆಟ್ಟಿ ಅವರ ಹೆಸರು ಶಿಫಾರಸು ಮಾಡುವುದಕ್ಕೂ ಮುನ್ನ ಎಸ್ ಆ ನಾಯಕ್ ಅವರ ಹೆಸರನ್ನು ರಾಜ್ಯಪಲರು ತಿರಸ್ಕರಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com