ಉತ್ತರ ಪ್ರದೇಶ ಚುನಾವಣೆ: ನೀತಿ ಸಂಹಿತೆ ಉಲ್ಲಂಘಿಸಿದ ಓವೈಸಿ ವಿರುದ್ಧ ಎಫ್ಐಆರ್

ವಿಧಾನಸಭಾ ಚುನಾವಣೆಗೆ ಸಿದ್ಧಗೊಂಡಿರುವ ಉತ್ತರ ಪ್ರದೇಶದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಎಂಐಎಂ ಪಕ್ಷದ ಅಸಾವುದ್ದೀನ್ ಓವೈಸಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಸಾವುದ್ದೀನ್ ಓವೈಸಿ
ಅಸಾವುದ್ದೀನ್ ಓವೈಸಿ

ಸಹರಾನ್ ಪುರ: ವಿಧಾನಸಭಾ ಚುನಾವಣೆಗೆ ಸಿದ್ಧಗೊಂಡಿರುವ ಉತ್ತರ ಪ್ರದೇಶದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಎಂಐಎಂ ಪಕ್ಷದ ಅಸಾವುದ್ದೀನ್ ಓವೈಸಿ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಎಂಐಎಂ ಪಕ್ಷದ ಮುಖಂಡ ಓವೈಸಿ ಜೊತೆಗೆ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ತಲಾತ್ ಖಾನ್ ವಿರುದ್ಧವೂ ಎಫ್ಐಆರ್ ದಾಖಲಾಗಿದೆ ಎಂದು ಎಸ್ ಪಿ ಸಂಜಯ್ ಸಿಂಗ್ ಹೇಳಿದ್ದಾರೆ. ಧಾರ್ಮಿಕ ಕೇಂದ್ರದ ಪ್ರದೇಶದಲ್ಲಿ, ವಿದ್ಯುತ್ ನಿಗಮಕ್ಕೆ ಸೇರಿದ ಪ್ರದೇಶ, ಖಾಸಗಿ ಅಂಗಡಿಗಳಲ್ಲಿ ಎಂಐಎಂ ಪಕ್ಷದ ಪೋಸ್ಟರ್ ಗಳನ್ನು ಅಂಟಿಸಲಾಗಿದೆ ಎಂದು ಅನಿಲ್ ಕುಮಾರ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 171H ಅಡಿಯಲ್ಲಿ (ಚುನಾವಣೆಗೆ ಸಂಬಂಧಿಸಿದಂತೆ ಅಕ್ರಮ ಪಾವತಿ) ಪ್ರಕರಣ ದಾಖಲಿಸಿಕೊಂಡಿದ್ದು ಎಫ್ಐಆರ್ ದಾಖಲಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com