
ನವದೆಹಲಿ: ಉತ್ತರಾಖಂಡ ರಾಜ್ಯದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಆರಂಭಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಚುನಾವಣಾ ತಯಾರಿ ಕುರಿತು ಪರಿಶೀಲನೆ ನಡೆಸಲು ಹಿರಿಯ ಚುನಾವಣಾ ಅಧಿಕಾರಿಗಳು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಚುನಾವಣಾ ಆಯುಕ್ತ ಎ.ಕೆ.ಜೋತಿ ಮತ್ತು ಒ.ಪಿ. ರಾವತ್ ಅವರು ನಾಳೆ ಉತ್ತರಾಖಂಡ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚುನಾವಣಾ ತಯಾರಿ ಕುರಿತಂತೆ ಪರಿಶೀಲನೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ.
ಎರಡು ದಿನಗಳ ಕಾಲ ಭೇಟಿ ನೀಡಲಿರುವ ಅಧಿಕಾರಿಗಳು ಇದೇ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳು, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ನಿತರೆ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
70 ಕ್ಷೇತ್ರಗಳನ್ನು ಹೊಂದಿರುವ ಉತ್ತರಾಖಂಡದಲ್ಲಿ ಫೆಬ್ರವರಿ 15 ರಂದು ಚುನಾವಣೆ ನಡೆಯಲಿದೆ.
Advertisement