ತಮಿಳುನಾಡು: ಜಲ್ಲಿಕಟ್ಟು ಕ್ರೀಡೆಯನ್ನು ಬೆಂಬಲಿಸಿ ಪ್ರತಿಭಟನೆ ಮಾಡುತ್ತಿದ್ದ 500ಕ್ಕೂ ಹೆಚ್ಚು ಮಂದಿ ಮಧುರೈಯಲ್ಲಿ ಬಂಧನ

ಜಲ್ಲಿಕಟ್ಟು ಕ್ರೀಡೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ 500ಕ್ಕೂ ಹೆಚ್ಚು ಜನರನ್ನು ತಮಿಳುನಾಡು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮಧುರೈ(ತಮಿಳುನಾಡು): ಜಲ್ಲಿಕಟ್ಟು ಕ್ರೀಡೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ 500ಕ್ಕೂ ಹೆಚ್ಚು ಜನರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ದೊಡ್ಡ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿದರು.  ಪ್ರತಿಭಟನಾಕಾರರ ಜೊತೆಗೆ ಅವರು ತಂದಿದ್ದ ಎತ್ತುಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನ ತೀರ್ಪನ್ನು  ಖಂಡಿಸಿ ಮದುರೈಯ ಅಲಂಗನಲ್ಲೂರು ಪಟ್ಟಣದ ರಸ್ತೆಗಳಲ್ಲಿ ಸಾವಿರಾರು ಮಂದಿ ನಿನ್ನೆ ಪ್ರತಿಭಟನೆಯಲ್ಲಿ ನಿರತರಾಗಿದ್ದರು. 
ಆದರೆ ಪ್ರತಿಭಟನೆಯನ್ನು ತಡೆಯಲು ಸ್ಥಳಕ್ಕೆ ಹೋದ ಪೊಲೀಸ್ ಸಿಬ್ಬಂದಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ಎತ್ತುಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಜಲ್ಲಿಕಟ್ಟು ಕ್ರೀಡೆಯನ್ನು ಬೆಂಬಲಿಸಿ ನಡೆದ ಸಾಮೂಹಿಕ ಪ್ರತಿಭಟನೆಯನ್ನು ತಡೆಯಲು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಗಿ ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com