ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅತ್ಯಾಚಾರವಾಗಿಲ್ಲ ಎಂದ ವೈದ್ಯಕೀಯ ವರದಿ..!

ಪ್ರಾಂಶುಪಾಲ ಮತ್ತು ಶಿಕ್ಷಕರಿಂದಲೇ ಬಾಲಕಿ ಮೇಲೆ ಸಾಮೂಹಿತ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಬಾಲಕಿ ಮೇಲೆ ಅತ್ಯಾಚಾರವೇ ಆಗಿಲ್ಲ ಎಂದು ವೈದ್ಯಕೀಯ ವರದಿಯಲ್ಲಿ ಹೇಳಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಪಾಟ್ನಾ: ಪ್ರಾಂಶುಪಾಲ ಮತ್ತು ಶಿಕ್ಷಕರಿಂದಲೇ ಬಾಲಕಿ ಮೇಲೆ ಸಾಮೂಹಿತ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಬಾಲಕಿ ಮೇಲೆ ಅತ್ಯಾಚಾರವೇ ಆಗಿಲ್ಲ ಎಂದು ವೈದ್ಯಕೀಯ ವರದಿಯಲ್ಲಿ ಹೇಳಲಾಗಿದೆ.

ಇತ್ತೀಚೆಗೆ ಬಿಹಾರದ ಜೆಹಾನ್ ಬಾದ್ ಜಿಲ್ಲೆಯ ಕಾಕೋ ಉರ್ದು ಮಾಧ್ಯಮಿಕ ಶಾಲೆಯಲ್ಲಿ 12 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲ ಹಾಗೂ ಇತರೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂಬ ವಿಚಾರ ಭಾರಿ  ಸುದ್ದಿಗೆ ಗ್ರಾಸವಾಗಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತ್ತಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆಕೆಯ ಮೇಲೆ ಅತ್ಯಾಚಾರವಾಗಿಲ್ಲ ಎಂದು ವರದಿ ನೀಡಲಾಗಿದೆ ಎಂದು ಬಿಹಾರ  ಪೊಲೀಸರು ತಿಳಿಸಿದ್ದಾರೆ.

ಬಿಹಾರದ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಕುಮಾರ್ ಅವರು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಬಾಲಕಿ ತಾಯಿ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಳಿಕ ಬಾಲಕಿಯನ್ನು  ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವೈದ್ಯಕೀಯ ವರದಿ ನಮ್ಮ ಕೈ ಸೇರಿದ್ದು, ಬಾಲಕಿ ಮೇಲೆ ಅತ್ಯಾಚಾರವಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮುಂದಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶಾಲಾಮಕ್ಕಳಿಗೆ ಶುಕ್ರವಾರ ರಜೆ ನೀಡಿದ್ದ ಕಾಕೋ ಮಾಧ್ಯಮಕಿ ಶಾಲೆ ಪ್ರಾಂಶುಪಾಲ ಭಾನುವಾರ ಶಾಲೆ ತೆರೆದಿದ್ದರು. ಅದೇ ದಿನ ಬಾಲಕಿ ಮೇಲೆ ಅತ್ಯಾಚಾರವಾದ ಸುದ್ದಿ ಹುಬ್ಬಿದ್ದು, ಘಟನೆ ನಡೆದಿರಬಹುದು ಎಂದು ಎಲ್ಲರೂ  ಭಾವಿಸಿದ್ದರು. ಅಂತೆಯೇ ಈ ಸಂಬಂಧ ಪೊಲೀಸರು ಶಾಲೆಯ ಪ್ರಾಂಶುಪಾಲ ಅಜು ಅಹ್ಮದ್ ಮತ್ತು ಶಿಕ್ಷಕರಾದ ಅಟುಲ್ ರೆಹಮಾನ್, ಅಬ್ದುಲ್ ಬಾರಿ, ಎಂಡಿ ಶೌಕತ್ ಎಂಬುವವರನ್ನು ಬಂಧಿಸಿದ್ದರು. ಅತ್ಯಾಚಾರ ವಿಚಾರ  ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಶಾಲೆ ಬಗ್ಗೆ ಸಾರ್ವಜನಿಕವಲಯದಲ್ಲಿ ವ್ಯಾಪಕ ಚರ್ಚೆಗಳಾಗಿದ್ದವು.

ಆದರೆ ಇದೀಗ ಬಾಲಕಿ ಮೇಲೆ ಅತ್ಯಾಚಾರವಾಗಿಲ್ಲ ಎಂದು ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com