

ಲಖನೌ: ಮುಂಬರುವ ಉತ್ತರಪ್ರದೇಶ ಚುನಾವಣೆ ಹಿನ್ನಲೆಯಲ್ಲಿ ಸಮಾಜವಾದಿ ಪಕ್ಷ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು, ಮೈತ್ರಿ ಪಕ್ಷದೊಂದಿಗೆ ಕೆಲಸ ಮಾಡುವುದು ದೊಡ್ಡ ಸವಾಲಿನ ಕೆಲಸವಾಗಿದೆ ಎಂದು ಸಮಾಜವಾದಿ ಪಕ್ಷ ಬುಧವಾರ ಹೇಳಿಕೊಂಡಿದೆ.
ಈ ಕುರಿತಂತೆ ಮಾತನಾಡಿರುವ ಸಮಾಜವಾದಿ ಪಕ್ಷದ ನಾಯಕಿ ಜುಹಿ ಸಿಂಗ್ ಅವರು, ಉತ್ತರಪ್ರದೇಶದ ಅಭಿವೃದ್ಧಿಗಾಗಿ ಕೆಲಸ ಮಾಡಿದರೆ ಸಮಾಜವಾದಿ ಪಕ್ಷ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಹೇಳಿದ್ದಾರೆ. ಇದಕ್ಕೆ ಸಮಾಜವಾದಿ ಪಕ್ಷದ ಎಲ್ಲಾ ನಾಯಕರು ಹಾಗೂ ನಾನೂ ಬೆಂಬಲ ವ್ಯಕ್ತಪಡಿಸಿದ್ದೇನೆ. ಮುಂದಿನ ದಿನಗಳಲ್ಲಿ ಮೈತ್ರಿ ಪಕ್ಷದೊಂದಿಗೆ ಕೆಲಸ ಮಾಡುವುದು ದೊಡ್ಡ ಸವಾಲಿನ ಕೆಲಸವಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಜೊತೆಗೆ ಮೈತ್ರಿಗೊಂಡ ಕೂಡಲೇ ಸಮಾಜವಾದಿ ಪಕ್ಷ ದುರ್ಬಲಗೊಂಡಿದೆ ಎಂದು ಅರ್ಥವಲ್ಲ. ಆದರೆ, ರಾಜ್ಯ ಅಭಿವೃದ್ಧಿಗಾಗಿ ಅಷ್ಟೇ ನಾವು ಮೈತ್ರಿಗೊಂಡಿದ್ದೇವೆ. ಮೈತ್ರಿಗೊಳ್ಳುವಿಕೆಯಿಂದ ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಧನಾತ್ಮಕ ಫಲಿತಾಂಶ ಬರಲಿದೆ ಎಂದು ತಿಳಿಸಿದ್ದಾರೆ.