ದೇಶ

ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರ್ಪಡೆ ಸಾಧ್ಯತೆ

ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದ್ದು ಒಂದೆರಡು ದಿನಗಳಲ್ಲಿ ಬಿಜೆಪಿ ಸೇರುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರ್ಪಡೆ ಸಾಧ್ಯತೆ
ಕುಮಾರ್ ವಿಶ್ವಾಸ್
Published On :
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದ್ದು ಒಂದೆರಡು ದಿನಗಳಲ್ಲಿ ಬಿಜೆಪಿ ಸೇರುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 
ಇತ್ತೀಚಿನ ವರದಿಗಳ ಪ್ರಕಾರ ಕುಮಾರ್ ವಿಶ್ವಾಸ್ ಅವರನ್ನು ಉತ್ತರ ಪ್ರದೇಶ ಚುನಾವಣೆಗೆ ಅಭ್ಯರ್ಥಿಯನ್ನಾಗಿಸುವುದಕ್ಕೆ ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಕುಮಾರ್ ವಿಶ್ವಾಸ್ ಅವರ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕರು, ಕುಮಾರ್ ವಿಶ್ವಾಸ್ ಅವರೊಂದಿಗಿನ ಮಾತುಕತೆ ಅಂತಿಮ ಹಂತದಲ್ಲಿದೆ. ಹೆಚ್ಚು ಸಮಯ ತೆಗೆದುಕೊಳ್ಳದೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. 
ಅಧಿಕೃತ ಘೋಷಣೆಗೂ ಮುನ್ನ ಕುಮಾರ್ ವಿಶ್ವಾಸ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಕಾಂಗ್ರೆಸ್ ನ ರಾಹುಲ್ ಗಾಂಧಿ ಹಾಗೂ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸಿದ್ದ ಕುಮಾರ್ ವಿಶ್ವಾಸ್ ಈಗ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗಾಜಿಯಾಬಾದ್ ಜಿಲ್ಲೆಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿರುವ ಪಂಕಜ್ ಸಿಂಗ್ ಸಹ ಇದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂಬ ವದಂತಿಯೂ ಇದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.