

ಚೆನ್ನೈ: ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಬಂದ್ ವೇಳೆ ರೈಲ್ ರೋಕೋ ಚಳುವಳಿ ನಡೆಸುತ್ತಿರುವ ಡಿಎಂಕೆ ಮುಖಂಡ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಚೆನ್ನೈನ ಮಾಂಬ್ಲಮ್ ರೈಲು ನಿಲ್ದಾಣದಲ್ಲಿ ನೂರಾರು ಡಿಎಂಕೆ ಕಾರ್ಯಕರ್ತರೊಂದಿಗೆ ಸೇರಿ ಎಂಕೆ ಸ್ಟಾಲಿನ್ ರೈಲ್ ರೋಕೋ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ತಡೆಯಲೆತ್ತಿನಿಸಿದ್ದು, ಆಕ್ರೋಶ ಭರಿತರಾಗಿದ್ದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ಮುರಿದು ರೈಲು ನಿಲ್ದಾಣದ ಒಳಗೆ ನುಗ್ಗಿದ್ದಾರೆ. ಬಳಿಕ ನಿಲ್ದಾಣದಲ್ಲಿದ್ದ ಪೀಠೋಪರಣಕರಣಗಳನ್ನು ಕಾರ್ಯಕರ್ತರು ಧ್ವಂಸ ಮಾಡಿದ್ದು, ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಮಾಂಬ್ಲಮ್ ರೈಲು ನಿಲ್ದಾಣ ಪೊಲೀಸರು ಎಂಕೆ ಸ್ಟಾಲಿನ್ ಅವರನ್ನು ಬಂಧಿಸಿದ್ದಾರೆ.
ಅಂತೆಯೇ ಜಲ್ಲಿಕಟ್ಟು ಆಚರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಇಂದು ಶಾಲಾ-ಕಾಲೇಜುಗಳು ಮುಚ್ಚಲ್ಪಟ್ಟಿವೆ. ಅಂತೆಯೇ ವಿವಿಧ ತಮಿಳುನಾಡು ಬಂದ್ ಮಾಡಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿವೆ. ಬಂದ್ ಗೆ ಟ್ಯಾಕ್ಸಿ, ಆಟೋ ಮತ್ತು ಸಾರಿಗೆ ಒಕ್ಕೂಟಗಳ ಸಂಘ ಬೆಂಬಲ ನೀಡಿರುವುದರಿಂದ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥಗೊಂಡಿದೆ.