ಆದರೆ ಈಗ ಸೋನಿಯಾ ಗಾಂಧಿ ಮಾತುಕತೆಗೆ ಮುಂದಾಗಿದ್ದು, ಎಐಸಿಸಿ ಅಧ್ಯಕ್ಷರ ಮಧ್ಯಸ್ಥಿಕೆಯಿಂದ ಕಾಂಗ್ರೆಸ್-ಎಸ್ ಪಿ ಮೈತ್ರಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಕಾಂಗ್ರೆಸ್ ನ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಉಭಯ ಪಕ್ಷಗಳಿಗೂ ಪರಸ್ಪರರ ಅಗತ್ಯತೆ ಇದೆ, ಶೀಘ್ರವೇ ಎಲ್ಲವೂ ನಿರ್ಧಾರವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.