ಅಸ್ಸಾಂ-ಅರುಣಾಚಲ ಪ್ರದೇಶ ಗಡಿಯಲ್ಲಿ ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ

ಅಸ್ಸಾಂ ಹಾಗೂ ಅರುಣಾಚಲ ಪ್ರದೇಶದ ಗಡಿಯಲ್ಲಿ ಶಂಕಿತ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಅಸ್ಸಾಂ ರೈಫಲ್ಸ್ ರೆಜಿಮೆಂಟ್ ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ...
ಹೆದ್ದಾರಿಯಲ್ಲಿ ಪ್ರವಾಸಿಗರ ವಾಹನಗಳನ್ನು ತಡೆಹಿಡಿದಿರುವುದು
ಹೆದ್ದಾರಿಯಲ್ಲಿ ಪ್ರವಾಸಿಗರ ವಾಹನಗಳನ್ನು ತಡೆಹಿಡಿದಿರುವುದು

ಗುವಾಹಟಿ: ಅಸ್ಸಾಂ ಹಾಗೂ ಅರುಣಾಚಲ ಪ್ರದೇಶದ ಗಡಿಯಲ್ಲಿ ಶಂಕಿತ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಅಸ್ಸಾಂ ರೈಫಲ್ಸ್ ರೆಜಿಮೆಂಟ್ ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಅಸ್ಸಾಂ ರಾಜ್ಯದ ತಿನ್ಸುಕಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ -53 ರಲ್ಲಿ ಸಾಗುತ್ತಿದ್ದ ಯೋಧರ ವಾಹನ ಹಾಗೂ 3 ಪ್ರವಾಸಿಗರ ವಾಹನಗಳ ಮೇಲೆ ಉಗ್ರರು ಏಕಾಏಕಿ ಗ್ರೆನೇಡ್ ಗಳ ದಾಳಿ ನಡೆಸಿದ್ದಾರೆಂದು ರಕ್ಷಣಾ ವಕ್ತಾರ ಮಾಹಿತಿ ನೀಡಿದ್ದಾರೆ.

ಈ ವೇಳೆ ಅಸ್ಸಾಂ ರೈಫಲ್ಸ್ ರೆಜಿಮೆಂಟ್ ನ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿಗಳು ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಸ್ಥಳದ ಸುತ್ತಲೂ ಯೋಧರು ಸುತ್ತುವರೆದಿದ್ದು, ಉಗ್ರರನ್ನು ಸದೆಬಡಿಯಲು ಯೋಧರು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಹೆದ್ದಾರಿಯಲ್ಲಿ ಚಲಿಸುವ ಪ್ರವಾಸಿಗರನ್ನು ತಡೆಹಿಡಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com