ಸ್ವಂತ ಸಹೋದರಿಯರ ಮೇಲೆ ಅಣ್ಣನಿಂದ ಅತ್ಯಾಚಾರ, ನಿರಂತರ ಲೈಂಗಿಕ ದೌರ್ಜನ್ಯ

ತನ್ನ ಸ್ವಂತ ಸಹೋದರಿಯರ ಮೇಲೆ ಅಣ್ಣನೊಬ್ಬ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಷ್ಟ್ರ ರಾಜಧಾನಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ತನ್ನ ಸ್ವಂತ ಸಹೋದರಿಯರ ಮೇಲೆ ಅಣ್ಣನೊಬ್ಬ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ತಿಲಕ್‌ ನಗರ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣದ ಕುರಿತುಂತೆ 22 ವರ್ಷದ ಆರೋಪಿಯನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಳೆದ ಏಪ್ರಿಲ್‌ನಿಂದ ತನ್ನ 17 ವರ್ಷದ ತಂಗಿ ಮೇಲೆ ಅತ್ಯಾಚಾರ ಹಾಗೂ 13 ವರ್ಷದ ತಂಗಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ  ಎನ್ನಲಾಗಿದೆ.

ತಂದೆ ತೀರಿಕೊಂಡಿದ್ದಾರೆ. ತಾಯಿ ಸಹ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಇದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ ಅಣ್ಣ ತನ್ನ ಸಹೋದರರಿಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

ಇನ್ನು ಈ ಕುರಿತು ಸಂತ್ರಸ್ತ ಯುವತಿಯರು ತಮ್ಮ ಸ್ನೇಹಿತನೊಬ್ಬನ ಮುಂದೆ ಹೇಳಿಕೊಂಡಿದ್ದಾರೆ. ಸಂತ್ರಸ್ತೆಯರ ಸ್ನೇಹಿತ ಎನ್‌ಜಿಓವೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ತನ್ನ ತಂದೆಗೆ ಈ ಕುರಿತು ಮಾಹಿತಿ ನೀಡಿದ್ದಾನೆ. ಬಳಿಕ ಸ್ನೇಹಿತ ತಂದೆ ಈ ಕುರಿತು ಪೊಲೀಸರಿಗೆ ತಿಳಿಸಿದರು ಎಂದು ಹೇಳಿದ್ದಾರೆ. ಪೋಸ್ಕೋ ಕಾಯ್ದೆಯಡಿ ಆರೋಪಿ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com