ಜ.23 ರಂದು ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ತಿದ್ದುಪಡಿ ಕಾಯ್ದೆಯನ್ನು ಶೀಘ್ರವೇ ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳಿಸಲಾಗುತ್ತಿದೆ. ಜಲ್ಲಿಕಟ್ಟು ಕ್ರೀಡೆಯನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಜಾರಿಗೆ ತರಲಾಗಿರುವ ತಿದ್ದುಪಡಿ ಕಾಯ್ದೆಯ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಚಾರಣೆ ನಡೆಸುವುದಾದರೆ, ಜಲ್ಲಿಕಟ್ಟು ಪರವಾಗಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಆದ್ಯತೆ ನೀಡಬೇಕೆಂದು 70 ಅರ್ಜಿಗಳು ಸಲ್ಲಿಕೆಯಾಗಿವೆ.